Featured

ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಸ್ಥಾನ : ಜೀರ್ಣೋದ್ಧಾರ ಪ್ರಯುಕ್ತ ಗರ್ಭಗುಡಿಗೆ ಶಿಲಾ ಮೂಹೂರ್ತ -Vishwanews24

ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಸ್ಥಾನ : ಜೀರ್ಣೋದ್ಧಾರ ಪ್ರಯುಕ್ತ ಗರ್ಭಗುಡಿಗೆ ಶಿಲಾ ಮೂಹೂರ್ತ -Vishwanews24

ಕಾಪು: ಕಾಪುವಿನ ಇತಿಹಾಸ ಪ್ರಸಿದ್ಧ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕಾಪು ಮಜೂರಿನ ಹಳೆ ಸರಕಾರಿ ಕಾಲೇಜಿನ ಆವರಣದಲ್ಲಿ ನೂತನ ಗರ್ಭಗುಡಿಗೆ ಹಾಗೂ ಉಚ್ಚಂಗಿ ಅಮ್ಮನ ಗುಡಿಗೆ ಶಿಲಾ ಮುಹೂರ್ತ ನೆರವೇರಿತು.

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಜೂರಿನಲ್ಲಿ ಶಿಲಾ ಮುಹೂರ್ತ ಜರುಗಿತು.ವೇದಮೂರ್ತಿ ಕುಮಾರ ಗುರು ತಂತ್ರಿ ಹಾಗೂ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಶಿಲಾ ಮುಹೂರ್ತದ ಪೂಜಾ ವಿಧಿವಿಧಾನ ಸಂಪನ್ನಗೊಂಡಿತು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಮಾತನಾಡಿ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯಿಂದ ಕಾಪು ಹೊಸ ಮಾರಿಗುಡಿಯನ್ನು ಸಮಗ್ರ ಜೀರ್ಣೋದ್ಧಾರ ಮಾಡುವುದೆಂದು ನಿಶ್ಚಯಿಸಿದ್ದೇವೆ.ಈ ಬಗ್ಗೆ ಕೆಲ ವರ್ಷಗಳ ಹಿಂದೆಯೇ ಶಿಲಾನ್ಯಾಸ ಹಾಗೂ ಷಡಾಧಾರ ಪ್ರಕ್ರಿಯೆ ಜರಗಿತ್ತು. ಸರಕಾರದ ಅನುಮೋದನೆ ಸಿಗುವಾಗ ವಿಳಂಬ ಆದುದರಿಂದ ಸ್ವಲ್ಪ ತಡವಾಗಿ ಶಿಲಾ ಮುಹೂರ್ತ ನೆರವೇರಿಸುತ್ತಿದ್ದೇವೆ.

ಶ್ರೀ ಮಾರಿಯಮ್ಮನ ಗರ್ಭಗುಡಿ ಹಾಗೂ ಉಚ್ಚಂಗಿ ಅಮ್ಮನ ಗರ್ಭ ಗುಡಿಯ ಬಗ್ಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾರ್ಕಳದ ಖ್ಯಾತ ಗುತ್ತಿಗೆದಾರ ಸುಜಯ ಕುಮಾರ್ ಶೆಟ್ಟಿ ವಹಿಸಿ ಕೊಂಡಿದ್ದು, ಇವತ್ತು ಶಿಲಾ ಮುಹೂರ್ತ ನೆರವೇರಿಸಲಾಗಿದೆ.ಈ ಎಲ್ಲಾ ಜೀರ್ಣೋದ್ಧಾರ ಪ್ರಕ್ರಿಯೆಗೆ ಕನಿಷ್ಠ 30-35 ಕೋಟಿ ವೆಚ್ಚ ತಗಲಲಿದ್ದು, ಮೊದಲನೇ ಹಂತದಲ್ಲಿ 18 ಕೋಟಿಯ ಕಾಮಗಾರಿ ಪ್ರಾರಂಭವಾಗಲಿದೆ. ಉಳಿದುದ್ದರಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭಿಸಲಿದ್ದೇವೆ ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಅನಿಲ್ ಬಳ್ಳಾಲ್, ಕಾಪು ರತ್ನಾಕರ ಹೆಗ್ಡೆ, ಬಾಲಾಜಿ ಯೋಗೀಶ್ ಶೆಟ್ಟಿ, ಸುಧಾಮ ಶೆಟ್ಟಿ, ಪುರಸಭಾಧ್ಯಕ್ಷ ಅನಿಲ್ ಕುಮಾರ್, ಕಲ್ಯ ಶ್ರೀಕರ ಶೆಟ್ಟಿ, ವಿಕ್ರಂ ಕಾಪು, ನಡಿಕೆರೆ ರತ್ನಾಕರ ಹೆಗ್ಡೆ, ಕಲ್ಯ ರಮೇಶ ಹೆಗ್ಡೆ, ದೇವಳದ ಆಡಳಿತಾಧಿಕಾರಿ ಪ್ರಶಾಂತ್ ಶೆಟ್ಟಿ, ಗೋವರ್ಧನ ಶೇರಿಗಾರ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

24 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

24 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago