ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ -Vishwanews24
ಮಂಗಳೂರು,: ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲು ಅವರು ಮಂಗಳವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷನಾದ ಬಳಿಕ ಪ್ರಥಮ ಬಾರಿಗೆ ಅವರು ಪೊಳಲಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಪ್ರಮುಖರಾದ ರಾಮ್ ದಾಸ್ ಬಂಟ್ವಾಳ, ವೆಂಕಟೇಶ ನಾವಡ, ಸುಕೇಶ್ ಚೌಟ, ಗೋಪಾಲ ಬಂಗೇರ, ಚಂದ್ರಹಾಸ ಶೆಟ್ಟಿ, ನಾರ್ಲ ಲೋಕೇಶ್ ಭರಣಿ,ಕೃಷ್ಣರಾಜ ಭರಣಿ, ಪವನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
