ಮುಂಬೈ: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಭಾರತೀಯ ಚಿತ್ರರಂಗವನ್ನು ಆಘಾತಕ್ಕೆ ದೂಡಿದೆ. ಕನ್ನಡದ ಪವರ್ ಸ್ಟಾರ್ ನಿಧನಕ್ಕೆ ಅನ್ಯ ಭಾಷೆಯ ನಟರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರು ‘ಇದು ಕರಾಳ ದಿನ’ ಎಂದಿದ್ದಾರೆ.
ಪುನೀತ್ ಸಾವಿಗೆ ಸಂತಾಪ ಸೂಚಿಸಿ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ದಿಗ್ಗಜ ರಾಜ್ ಕುಮಾರ್ ಅವರ ಕಿರಿಯ ಪುತ್ರ, ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದರು. ಅವರಿಗೆ ಕೇವಲ 46 ವರ್ಷಗಳಾಗಿತ್ತು ಇದು ನಮಗೆಲ್ಲರಿಗೂ ತೀವ್ರ ಆಘಾತವನ್ನುಂಟು ಮಾಡಿದೆ ದಿವಂಗತ ರಾಜ್ ಕುಮಾರ್ ಅವರ ಕುಟುಂಬ ನಮಗೆ ಯಾವತ್ತೂ ತುಂಬಾ ಹತ್ತಿರವಾಗಿದ್ದರು ಎಂದು ಬಿಗ್ ಬಿ ಬರೆದಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಸಾವಿಗೆ ಅಮಿತಾಭ್ ಬಚ್ಚನ್ ಅವರು ಟ್ವಿಟ್ಟರ್‌ನಲ್ಲಿಯೂ ಸಂತಾಪ ಸೂಚಿಸಿದ್ದಾರೆ. “ಕರಾಳ ಮತ್ತು ಪ್ರಾರ್ಥನೆಯ ದಿನ .. ಕುಟುಂಬಕ್ಕೆ ಹತ್ತಿರವಿರುವ ಇಬ್ಬರು ಇಂದು ನಿಧನರಾದರು .. ಇದು ತುಂಬಾ ಕತ್ತಲೆಯಾಗಿದೆ” ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…