ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು , ಜನ ಬೆಂಬಲಕ್ಕೆ ಕೃತಜ್ಞತೆ : ಡಿ.ಕೆ.ಶಿವಕುಮಾರ್  – vishwanews24

Featured, ರಾಜ್ಯ ನ್ಯೂಸ್

ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು , ಜನ ಬೆಂಬಲಕ್ಕೆ ಕೃತಜ್ಞತೆ : ಡಿ.ಕೆ.ಶಿವಕುಮಾರ್ 

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಗೆಲುವು ಬಹುತೇಕ ಖಚಿತಗೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಜನರು ‘ಕೈ’ ಹಿಡಿದಿದ್ದಾರೆ. ಜನ ಬೆಂಬಲಕ್ಕೆ ಕಾಂಗ್ರೆಸ್‌ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಅವರು ‘ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು. ‘ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಇದಾಗಿದೆ ‘ ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್ ಖಾನ್ ಪಠಾಣ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ : ಸಿ.ಪಿ.ಯೋಗೇಶ್ವರ್‌ ಭರ್ಜರಿ ಗೆಲುವು  – vishwanews24

Leave a Reply