ಬೆಂಗಳೂರು : ನಮ್ಮ ಕುಟುಂಬದ ವಿರುದ್ಧ ಷಡ್ಯಂತರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದರು.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಎಂಎಲ್ಸಿ ಸೂರಜ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ನೀಡಿತ್ತು. ಹಾಗಾಗಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ಮಾತನಾಡಿದರು.
ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ಜೈಲಿನಿಂದ ಬಿಡುಗಡೆ ಬಳಿಕ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದರು.
ಇದು ಕೇಸ್ ಅಲ್ಲ ಷಡ್ಯಂತರ ಹಾಗೂ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ ಕಾರು ಚಾಲಕನು ಅಲ್ಲ. ನಮಗೆ ಲೋಕೇಶ್ ಅಂತ ಒಬ್ಬನೇ ಕಾರು ಚಾಲಕ ಇದ್ದಾನೆ. ಹಾಸನದಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಕಪ್ಪು ಚುಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತರ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಸೂರಜ್ ರೇವಣ್ಣ ಹೇಳಿಕೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…