Featured

ಇದು ಪ್ರಜಾಪ್ರಭುತ್ವದ ಗೆಲುವು ; ಸರ್ಕಾರ ಬಿದ್ದು ಹೋಗುವುದು ಖಚಿತ : ಬಿ.ಎಸ್ ಯಡಿಯೂರಪ್ಪ -Vishwanews24

ಬೆಂಗಳೂರು,: ಸರ್ಕಾರ ಬಿದ್ದು ಹೋಗುವುದು ಖಚಿತ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇದು ಪ್ರಜಾಪ್ರಭುತ್ವದ ಗೆಲುವು. ಸ್ಪೀಕರ್ ರಾಜೀನಾಮೆ ಬಗ್ಗೆ ಬೇಗ ತೀರ್ಮಾನ ತಗೊಂಡು ಸುಪ್ರೀಂಕೋರ್ಟ್‌ಗೆ ತನ್ನ ತೀರ್ಪು ತಿಳಿಸಬೇಕು ಅಂತ ಹೇಳಿದ್ದೇನೆ. ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ. ಕುಮಾರಸ್ವಾಮಿ ನಾಳೆ ವಿಶ್ವಾಸಮತ ಪ್ರಸ್ತಾವ ಮಂಡಿಸುತ್ತಾರೆ. ಅವರು ಈಗ ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಈ ಸರ್ಕಾರ ಬಿದ್ದು ಹೋಗುವುದು ಖಚಿತ ಎಂದು ಹೇಳಿದ್ದಾರೆ.

ರಾಜ್ಯದ ಮೈತ್ರಿ ಸರ್ಕಾರದ ಅಳಿವು–ಉಳಿವಿನ ಪ್ರಶ್ನೆಯನ್ನು ಹುಟ್ಟು ಹಾಕಿದ್ದ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆಗೆ ಸಂಬಂಧಿಸಿದ ಮಹತ್ವದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್‌ ಇಂದು ಮಧ್ಯಂತರ ಆದೇಶ ನೀಡಿದೆ. ಸೂಕ್ತ ಕಾಲಮಿತಿಯಲ್ಲಿ ಪ್ರಕರಣವನ್ನು ಇತ್ಯರ್ಥ ಮಾಡುವಂತೆ ಸ್ಪೀಕರ್‌ಗೆ ಹೇಳಿದೆ. ಇದು ಮಧ್ಯಂತರ ಆದೇಶವಾಗಿದ್ದು, ಪ್ರಕರಣದ ವಿಸ್ತೃತ ವಿಚಾರಣೆಯ ನಂತರ ಅಂತಿಮ ತೀರ್ಪು ನೀಡುವುದಾಗಿಯೂ ತಿಳಿಸಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago