Featured

ಇದು ಮೂರ್ಖ ಸರ್ಕಾರ, ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

ಇದು ಮೂರ್ಖ ಸರ್ಕಾರ. ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

ಪ್ರಧಾನಿ ನಗುಮೊಗದ ಜಾಹೀರಾತು ಮೂಲಕ ಸರ್ಕಾರ ಜನರ ನೋವನ್ನು ಗೇಲಿ ಮಾಡಿದೆ..

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದು, “ಇದು ಮೂರ್ಖ ಸರ್ಕಾರ. ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!” ವಾಗ್ದಾಳಿ ನಡೆಸಿದ್ದಾರೆ.

“ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ” ಎಂದಿದ್ದಾರೆ.

ಭಾರತದ ವಾಯು ಸೇನೆಗೆ ಫ್ರಾನ್ಸ್ ನಿಂದ 5ನೇ ಬ್ಯಾಚ್‍ನ ರಫೇಲ್ ಯುದ್ಧ ವಿಮಾನ -Vishwanews24

“ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು” ಎಂದು ಕಿಡಿಕಾರಿದ್ದಾರೆ.

“ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು” ಎಂದಿದ್ದಾರೆ.

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

“ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ” ಎಂದು ತಿಳಿಸಿದ್ದಾರೆ.

“ಇದನ್ನು ಈ ಮೂರ್ಖ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಬೆಡ್‌ ಇಲ್ಲ. ಇದರೊಂದಿಗೆ ಆಕ್ಸಿಜನ್‌ ಕೊರತೆ ಇದೆ. ಔಷಧಿ ಕೂಡಾ ಇಲ್ಲ. ಜನ ಸಾಯುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಕೋಟ್ಯಾಂತರ ರೂ. ಖರ್ಚು ಮಾಡಿ ಜಾಹೀರಾತು ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು : ಅಧಿಕಾರಿಗಳಿಗೆ ಬಸವರಾಜ ಬೊಮ್ಮಾಯಿ ಸೂಚನೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago