ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ : ಸಿದ್ದರಾಮಯ್ಯ – Vishwanews24
ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ಸಿದ್ದರಾಮಯ್ಯ
ನವದೆಹಲಿ ( vishwanews24): ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ‘ಛಲೋ ದೆಹಲಿ’ ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದರು,
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದೂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ ಎಂದು ಅವರು ಹೇಳಿದರು. ಯುಪಿಎ ಅವಧಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇವೆ ಎಂಬ ಬಿಜೆಪಿ ಸರ್ಕಾರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೆಯೇ ಸೆಸ್, ಸರ್ಚಾರ್ಜ್ ಬಗ್ಗೆಯೂ ಹೊರಡಿಸಲಿ ಎಂದರು.
ಕರ್ನಾಟಕದಲ್ಲಿ ಬರಗಾಲ ಇದೆ. ಐದು ತಿಂಗಳಾದರೂ ಕೇಂದ್ರ ಸರ್ಕಾರ ಇದುವರೆಗೂ ಹಣ ನೀಡಿಲ್ಲ. ನಮ್ಮ ಸಚಿವರು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಭೇಟಿಯಾದರು. ನಾನೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಆಗ ಅಮಿತ್ ಶಾ, ಡಿಸೆಂಬರ್ 23 ರಂದು ಸಭೆ ಕರೆದು ನಿರ್ಧಾರ ತೆಗೆದುಕೊಳ್ತೀನಿ ಅಂದರು. ಆದರೆ ಏನೂ ಮಾಡಿಲ್ಲ ಎಂದರು.
ಇಷ್ಟು ದೊಡ್ಡಬರಗಾಲ ರಾಜ್ಯದಲ್ಲಿ ಎಂದೂ ಬಂದಿರಲಿಲ್ಲ. ನಾವು 17 ಸಾವಿರದ 900 ಕೋಟಿ ರೂಪಾಯಿ ಪರಿಹಾರ ಕೇಳಿದ್ದೆವು. ಎಂನರೇಗಾದ ಅಡಿಯಲ್ಲಿ ಕೆಲಸದ ದಿನಗಳನ್ನು 150 ದಿನ ಮಾಡಿ ಅಂತಾ ಕೇಳಿದ್ವಿ. ಅದನ್ನೂ ಮಾಡಿಲ್ಲ ಎಂದು ಸಿದ್ದರಾಮಯ್ಯ ದೂರಿದರು.
ಉಡುಪಿಯಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ : ರೆನೋಲ್ಡ್ ಪ್ರವೀಣ್ ಕುಮಾರ್ – Vishwanews24
