Featured

ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ : ಸಿದ್ದರಾಮಯ್ಯ – Vishwanews24

ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ಸಿದ್ದರಾಮಯ್ಯ

ನವದೆಹಲಿ ( vishwanews24): ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಂಗಳವಾರ ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್​ ಮಂತರ್​​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ‘ಛಲೋ ದೆಹಲಿ’  ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದರು,

ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದೂ ಸಿದ್ದರಾಮಯ್ಯ ಹೇಳಿದರು. ಬಜೆಟ್​​​ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ ಎಂದು ಅವರು ಹೇಳಿದರು. ಯುಪಿಎ ಅವಧಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇವೆ ಎಂಬ ಬಿಜೆಪಿ ಸರ್ಕಾರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೆಯೇ ಸೆಸ್​, ಸರ್​​ಚಾರ್ಜ್ ಬಗ್ಗೆಯೂ ಹೊರಡಿಸಲಿ ಎಂದರು.

ಕರ್ನಾಟಕದಲ್ಲಿ ಬರಗಾಲ ಇದೆ. ಐದು ತಿಂಗಳಾದರೂ ಕೇಂದ್ರ ಸರ್ಕಾರ ಇದುವರೆಗೂ ಹಣ ನೀಡಿಲ್ಲ. ನಮ್ಮ ಸಚಿವರು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಭೇಟಿಯಾದರು. ನಾನೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಆಗ ಅಮಿತ್ ಶಾ, ಡಿಸೆಂಬರ್ 23 ರಂದು ಸಭೆ ಕರೆದು ನಿರ್ಧಾರ ತೆಗೆದುಕೊಳ್ತೀನಿ ಅಂದರು. ಆದರೆ ಏನೂ ಮಾಡಿಲ್ಲ ಎಂದರು.

ಇಷ್ಟು ದೊಡ್ಡಬರಗಾಲ ರಾಜ್ಯದಲ್ಲಿ ಎಂದೂ ಬಂದಿರಲಿಲ್ಲ. ನಾವು 17 ಸಾವಿರದ 900 ಕೋಟಿ ರೂಪಾಯಿ ಪರಿಹಾರ ಕೇಳಿದ್ದೆವು. ಎಂನರೇಗಾದ ಅಡಿಯಲ್ಲಿ ಕೆಲಸದ ದಿನಗಳನ್ನು 150 ದಿನ ಮಾಡಿ ಅಂತಾ ಕೇಳಿದ್ವಿ. ಅದನ್ನೂ ಮಾಡಿಲ್ಲ ಎಂದು ಸಿದ್ದರಾಮಯ್ಯ ದೂರಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago