ಬೆಂಗಳೂರು: ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಕೇಂದ್ರ ಬಜೆಟ್ ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ದೇಶದ ಆರ್ಥಿಕ ಪರಿಸ್ಥಿತಿಯನ್ನು ತಿಳಿಸದೇ ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಇಲ್ಲ. ವಿಕಸಿತ ಭಾರತ ಎಂದು ನರೇಂದ್ರ ಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಭಾರತ ಮಾಡುವ ಬಜೆಟ್ ಆಗಿದೆ. ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಬಜೆಟ್ ನಲ್ಲಿ ಇಲ್ಲ. ಆದರೆ ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಕೃಷಿಭಾಗ್ಯ ಕಾರ್ಯಕ್ರಮಗಳು ಈ ವರ್ಗದ ಜನರಿಗೆ ಕೊಟ್ಟೆವು” ಎಂದು ಹೇಳಿದ್ದಾರೆ.
ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ.30 ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ತು ಹೆಚ್ಚಿಸಿದ್ದಾರೆ. ಬಡವರ,ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
2004 -14 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ ಶೇ.13.79 ಇತ್ತು. ಈಗ ಬಜೆಟ್ ಬೆಳವಣಿಗೆ ಶೇ.9.6ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು ಶೇ.9.6 ಗೆ ತಂದಿದ್ದಾರೆ. ಶೇ.4.19 ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರಕಾರದಲ್ಲಿ ಶೇ.11.14 ಇತ್ತು ಎನ್.ಡಿ.ಎ ಕಾಲದಲ್ಲಿ ಶೇ.6.4 ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ. ದೇಶದ ವಿನಾಶಕಾರಿ ಕುಸಿತದ ಬಜೆಟ್ ಎಂದು ಮುಖ್ಯಮಂತ್ರಿ ವ್ಯಾಖ್ಯಾನಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…