Featured

ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ : ಸಿಎಂ ಸಿದ್ದರಾಮಯ್ಯ – vishwanews24

ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ : ಸಿಎಂ ಸಿದ್ದರಾಮಯ್ಯ – vishwanews24

ಬೆಂಗಳೂರು: ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಕೇಂದ್ರ ಬಜೆಟ್‌ ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ದೇಶದ ಆರ್ಥಿಕ ಪರಿಸ್ಥಿತಿಯನ್ನು ತಿಳಿಸದೇ ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಇಲ್ಲ. ವಿಕಸಿತ ಭಾರತ ಎಂದು ನರೇಂದ್ರ ಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಭಾರತ ಮಾಡುವ ಬಜೆಟ್ ಆಗಿದೆ. ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಬಜೆಟ್‌ ನಲ್ಲಿ ಇಲ್ಲ. ಆದರೆ ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಕೃಷಿಭಾಗ್ಯ ಕಾರ್ಯಕ್ರಮಗಳು ಈ ವರ್ಗದ ಜನರಿಗೆ ಕೊಟ್ಟೆವು” ಎಂದು ಹೇಳಿದ್ದಾರೆ.

ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ.30 ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ತು ಹೆಚ್ಚಿಸಿದ್ದಾರೆ. ಬಡವರ,ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2004 -14 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ ಶೇ.13.79 ಇತ್ತು. ಈಗ ಬಜೆಟ್ ಬೆಳವಣಿಗೆ ಶೇ.9.6ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು ಶೇ.9.6 ಗೆ ತಂದಿದ್ದಾರೆ. ಶೇ.4.19 ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರಕಾರದಲ್ಲಿ ಶೇ.11.14 ಇತ್ತು ಎನ್.ಡಿ.ಎ ಕಾಲದಲ್ಲಿ ಶೇ.6.4 ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ. ದೇಶದ ವಿನಾಶಕಾರಿ ಕುಸಿತದ ಬಜೆಟ್ ಎಂದು ಮುಖ್ಯಮಂತ್ರಿ ವ್ಯಾಖ್ಯಾನಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

7 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

8 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

9 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

9 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago