ನವದೆಹಲಿ, : ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಸದಾ ವಾಗ್ದಾಳಿ ನಡೆಸುತ್ತಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ದೆಹಲಿಯಲ್ಲಿ ರೈತರು ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಹಾಗೆಯೇ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ನಡೆಸಿದ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ತೀವ್ರವಾಗಿ ಖಂಡಿಸಿದ್ದಾರೆ.”ಇದು ಸುಳ್ಳು ಹೇಳುವ, ಲೂಟಿ ಮಾಡುವ, ಸೂಟು ಬೂಟಿನ ಸರ್ಕಾರ” ಎಂದು ಟೀಕಿಸಿದ್ದಾರೆ.
ಬುಧವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಸರ್ಕಾರವು ರೈತನ ಆದಾಯ ದ್ವಿಗುಣವಾಗುತ್ತದೆ ಎಂದು ಹೇಳಿತು. ಆದರೆ ಮಾಡಿದ್ದು ತಮ್ಮ ಸ್ನೇಹಿತರ ಆದಾಯ ನಾಲ್ಕು ಪಟ್ಟು ಹಾಗೂ ರೈತರ ಆದಾಯ ಅರ್ಧದಷ್ಟು. ಇದು ಸುಳ್ಳು ಹೇಳುವ, ಲೂಟಿ ಮಾಡುವ, ಸೂಟು ಬೂಟಿನ ಸರ್ಕಾರ” ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಹಾಗೆಯೇ ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ನಡೆಸಿದ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗದ ವಿಡಿಯೋವನ್ನು ಕೂಡಾ ಉಲ್ಲೇಖಿಸಿದ್ದಾರೆ.
ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಸತತ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ರೈತರು ಹಾಗೂ ಸರ್ಕಾರದ ನಡುವೆ ನಡೆದ ಮೊದಲ ಮಾತುಕತೆ ವಿಫಲವಾಗಿದೆ. ಇನ್ನು ಸರ್ಕಾರ ಗುರುವಾರ ರೈತರನ್ನು ಮಾತುಕತೆಗೆ ಕರೆದಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…