Featured

ಇದು ಸುಳ್ಳು ಹೇಳುವ, ಲೂಟಿ ಮಾಡುವ, ಸೂಟು ಬೂಟಿನ ಸರ್ಕಾರ  : ಕೇಂದ್ರ ಸರ್ಕಾರದ ವಿರುದ್ದ  ರಾಹುಲ್‌ ಗಾಂಧಿ -Vishwanews24

ಇದು ಸುಳ್ಳು ಹೇಳುವ, ಲೂಟಿ ಮಾಡುವ, ಸೂಟು ಬೂಟಿನ ಸರ್ಕಾರ  : ಕೇಂದ್ರ ಸರ್ಕಾರದ ವಿರುದ್ದ  ರಾಹುಲ್‌ ಗಾಂಧಿ  -Vishwanews24

ನವದೆಹಲಿ,  : ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಸದಾ ವಾಗ್ದಾಳಿ ನಡೆಸುತ್ತಲಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರು ದೆಹಲಿಯಲ್ಲಿ ರೈತರು ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಹಾಗೆಯೇ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ನಡೆಸಿದ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ತೀವ್ರವಾಗಿ ಖಂಡಿಸಿದ್ದಾರೆ.”ಇದು ಸುಳ್ಳು ಹೇಳುವ, ಲೂಟಿ ಮಾಡುವ, ಸೂಟು ಬೂಟಿನ ಸರ್ಕಾರ” ಎಂದು ಟೀಕಿಸಿದ್ದಾರೆ.

ಬುಧವಾರ ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ಸರ್ಕಾರವು ರೈತನ ಆದಾಯ ದ್ವಿಗುಣವಾಗುತ್ತದೆ ಎಂದು ಹೇಳಿತು. ಆದರೆ ಮಾಡಿದ್ದು ತಮ್ಮ ಸ್ನೇಹಿತರ ಆದಾಯ ನಾಲ್ಕು ಪಟ್ಟು ಹಾಗೂ ರೈತರ ಆದಾಯ ಅರ್ಧದಷ್ಟು. ಇದು ಸುಳ್ಳು ಹೇಳುವ, ಲೂಟಿ ಮಾಡುವ, ಸೂಟು ಬೂಟಿನ ಸರ್ಕಾರ” ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಹಾಗೆಯೇ ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ನಡೆಸಿದ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗದ ವಿಡಿಯೋವನ್ನು ಕೂಡಾ ಉಲ್ಲೇಖಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಸತತ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ರೈತರು ಹಾಗೂ ಸರ್ಕಾರದ ನಡುವೆ ನಡೆದ ಮೊದಲ ಮಾತುಕತೆ ವಿಫಲವಾಗಿದೆ. ಇನ್ನು ಸರ್ಕಾರ ಗುರುವಾರ ರೈತರನ್ನು ಮಾತುಕತೆಗೆ ಕರೆದಿದೆ.

Vishwa News 24

Recent Posts

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

5 minutes ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

14 minutes ago

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

19 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

19 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

20 hours ago