ಉಡುಪಿ : ಜಿಲ್ಲಾ ಉತ್ಸವದ ಅಂಗವಾಗಿ ಕಾಪು ಲೈಟ್ ಹೌಸ್‍ನಲ್ಲಿ ಇದೇ ಮೊದಲ ಬಾರಿಗೆ ಲೈಟ್ ಹೌಸ್ ಉತ್ಸವವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.
ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಉತ್ಸವದ ಆಂಗವಾಗಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ಚರ್ಚಿಸಲಾಯಿತು.
ಕಾಪು ಲೈಟ್ ಹೌಸ್‍ಗೆ ವಿದ್ಯುತ್ ಬೆಳಕಿನ ಅಲಂಕಾರ ಹಾಗೂ ಸಂಗೀತ ಪ್ರದರ್ಶನ, ಮತ್ತು ವಿವಿಧ ಶೈಲಿಯ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಸ್ಥಳೀಯ ಗುರುತಿಸಲ್ಪಟ್ಟ ಕಲಾವಿದರಿಂದ ಕಾರ್ಯಕ್ರಮಗಳು, ಸ್ಥಳೀಯ ಮೀನುಗಾರರಿಂದ ಬೋಟ್ ರೇಸ್, ಗಾಳಿಪಟ ಉತ್ಸವ, ಬೀಚ್ ಯೋಗಾಸನ ಕಾರ್ಯಕ್ರಮ, ಆಹಾರ ಮಳಿಗೆ ಹಾಗೂ ಇತರೆ ಕರಕುಶಲ ಮಳಿಗೆ ಸ್ಥಾಪನೆ, ವೈನ್ ಉತ್ಸವ, ಸರ್ಫಿಂಗ್, ವಿವಿಧ ಆಟೋಟ ಸ್ವರ್ಧೆಗಳು ಮತ್ತು ಬೀಚ್ ಮ್ಯಾರಥಾನ್ ಕಾರ್ಯಕ್ರಮ, ಪೋಟೋಗ್ರಾಫ್ ಮತ್ತು ವಿಡಿಯೋ ಸ್ಪರ್ದೆ, ಕಾಪು ಬೀಚ್‍ನ ಪ್ರತಿಬಿಂಬಿಸುವ ಚಿತ್ರಕಲೆ ಮತ್ತು ಕಲಾಶಿಬಿರ, ಗೂಡುದೀಪ ಸ್ವರ್ಧೆ, ಸೆಲ್ಪಿ ಪಾಯಿಂಟ್ಸ್, ಟ್ಯಾಟೂ, ಸ್ಟ್ರಿಟ್ ಫ್ಲೇ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ರೂಪುರೇಷೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದ ದಿನಾಂಕ ನಿಗದಿ ಹಾಗೂ ಇನ್ನಷ್ಟು ಸಿದ್ಧತೆ ಮಾಡಿಕೊಳ್ಳಲು ಕಾಪುವಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರವಾಸೋದ್ಯಮ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…