ಇದೇ ಮೊದಲ ಬಾರಿಗೆ ಕಾಪು ಲೈಟ್ ಹೌಸ್ ಉತ್ಸವ -Vishwanews24

ಉಡುಪಿ : ಜಿಲ್ಲಾ ಉತ್ಸವದ ಅಂಗವಾಗಿ ಕಾಪು ಲೈಟ್ ಹೌಸ್‍ನಲ್ಲಿ ಇದೇ ಮೊದಲ ಬಾರಿಗೆ ಲೈಟ್ ಹೌಸ್ ಉತ್ಸವವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.

ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಉತ್ಸವದ ಆಂಗವಾಗಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ಚರ್ಚಿಸಲಾಯಿತು.

ಕಾಪು ಲೈಟ್ ಹೌಸ್‍ಗೆ ವಿದ್ಯುತ್ ಬೆಳಕಿನ ಅಲಂಕಾರ ಹಾಗೂ ಸಂಗೀತ ಪ್ರದರ್ಶನ, ಮತ್ತು ವಿವಿಧ ಶೈಲಿಯ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಸ್ಥಳೀಯ ಗುರುತಿಸಲ್ಪಟ್ಟ ಕಲಾವಿದರಿಂದ ಕಾರ್ಯಕ್ರಮಗಳು, ಸ್ಥಳೀಯ ಮೀನುಗಾರರಿಂದ ಬೋಟ್ ರೇಸ್, ಗಾಳಿಪಟ ಉತ್ಸವ, ಬೀಚ್ ಯೋಗಾಸನ ಕಾರ್ಯಕ್ರಮ, ಆಹಾರ ಮಳಿಗೆ ಹಾಗೂ ಇತರೆ ಕರಕುಶಲ ಮಳಿಗೆ ಸ್ಥಾಪನೆ, ವೈನ್ ಉತ್ಸವ, ಸರ್ಫಿಂಗ್, ವಿವಿಧ ಆಟೋಟ ಸ್ವರ್ಧೆಗಳು ಮತ್ತು ಬೀಚ್ ಮ್ಯಾರಥಾನ್ ಕಾರ್ಯಕ್ರಮ, ಪೋಟೋಗ್ರಾಫ್ ಮತ್ತು ವಿಡಿಯೋ ಸ್ಪರ್ದೆ, ಕಾಪು ಬೀಚ್‍ನ ಪ್ರತಿಬಿಂಬಿಸುವ ಚಿತ್ರಕಲೆ ಮತ್ತು ಕಲಾಶಿಬಿರ, ಗೂಡುದೀಪ ಸ್ವರ್ಧೆ, ಸೆಲ್ಪಿ ಪಾಯಿಂಟ್ಸ್, ಟ್ಯಾಟೂ, ಸ್ಟ್ರಿಟ್ ಫ್ಲೇ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ರೂಪುರೇಷೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ದಿನಾಂಕ ನಿಗದಿ ಹಾಗೂ ಇನ್ನಷ್ಟು ಸಿದ್ಧತೆ ಮಾಡಿಕೊಳ್ಳಲು ಕಾಪುವಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರವಾಸೋದ್ಯಮ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago