Featured

ಇದೇ 27ರಂದು ಬಿಡುಗಡೆಯಾಗುತ್ತಿದೆ ರಕ್ಷಿತ್‌ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ : ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ಶುರು -Vishwanews24

ರಕ್ಷಿತ್‌ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಪ್ಯಾನ್‌ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಇದೇ 27ರಂದು ಚಿತ್ರವು ರಾಜ್ಯದಲ್ಲಿ ಬಿಡುಗಡೆಯಾಗುತ್ತಿದೆ.

ಚಿತ್ರದ ಟಿಕೆಟ್‌ ಕಾಯ್ದಿರಿಸಲು ಆನ್‌ಲೈನ್‌ ಬುಕ್ಕಿಂಗ್‌ ಶುರುವಾಗಿದೆ. ಮೂರು ದಿನಗಳ ಮೊದಲು ಆನ್‌ಲೈನ್‌ ಬುಕ್ಕಿಂಗ್‌ ಶುರುವಾಗುವುದು ಸಾಮಾನ್ಯ. ಆದರೆ, ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಹವಾ ಕಾವೇರುತ್ತಿರುವುದರಿಂದ ಆನ್‌ಲೈನ್‌ ಬುಕ್ಕಿಂಗ್‌ ಒಂದು ವಾರ ಮುಂಚಿತವಾಗಿಯೇ ಆರಂಭವಾಗಿದೆ.

ಐದು ಭಾಷೆಗಳಲ್ಲಿ ನಿರ್ಮಿಸಿರುವ ಈ ಚಿತ್ರವನ್ನು ಒಂದೇ ದಿನ ಎಲ್ಲಾ ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಆರಂಭದಲ್ಲಿ ನಿರ್ಧರಿಸಿತ್ತು. ಆದರೆ, ಈಗ ನಿರ್ಧಾರ ಬದಲಿಸಿದೆ. ಕನ್ನಡದಲ್ಲಿ 27ರಂದು ಬಿಡುಗಡೆ ಮಾಡಿದರೆ,‌ ತೆಲುಗಿನಲ್ಲಿ ಜನವರಿ 1, ತಮಿಳು ಹಾಗೂ ಮಲಯಾಳದಲ್ಲಿ ಜನವರಿ 3 ಹಾಗೂ ಹಿಂದಿಯಲ್ಲಿ ಜ.17ರಂದು ಬಿಡುಗಡೆ ಮಾಡಲಾಗುತ್ತಿದೆ.

ಚಿತ್ರದ ಟ್ರೇಲರ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆದ ಬೆನ್ನಲ್ಲೇ, ‘ಹ್ಯಾಂಡ್ಸಾಪ್‌’ ಹಾಡು ವೈರಲ್‌ ಆಗಿದೆ. ಹ್ಯಾಂಡ್ಸಾಪ್‌ ಚಾಲೆಂಜ್‌ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಆ ಹಾಡಿನಲ್ಲಿ ರಕ್ಷಿತ್‌ ಶೆಟ್ಟಿ ಹಾಕಿರುವ ಸ್ಟೆಪ್‌ ಅನ್ನು ಅನುಕರಿಸಿ ನಟ– ನಟಿಯರು, ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುತ್ತಿದ್ದಾರೆ. ಹ್ಯಾಂಡ್ಸಾಪ್‌ ಚಾಲೆಂಜ್‌ಗೆ ನಟಿ ಸಂಯುಕ್ತ ಹೆಗ್ಡೆ ಹಾಕಿರುವ ಸ್ಟೆಪ್‌ ಕೂಡ ನೆಟ್ಟಿಗರ ಗಮನ ಸೆಳೆಯುತ್ತಿದೆ.

ಸಚಿನ್‌ ರವಿ ನಿರ್ದೇಶನದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಮೂಲಕ ರಕ್ಷಿತ್‌ ಶೆಟ್ಟಿ ದೊಡ್ಡ ಗ್ಯಾಪ್‌ನ ಬಳಿಕ ಪರದೆ ಮೇಲೆ ನಾರಾಯಣನ ಅವತಾರ ಎತ್ತಿದ್ದಾರೆ. ಅಂದಹಾಗೆ ಈ ನಾರಾಯಣ ‘ಕಿರಿಕ್‌ ಪಾರ್ಟಿ’ಯ ಕರ್ಣನಷ್ಟು ಮುಗ್ಧನಲ್ಲ. ಬಹಳ ಚಾಲಾಕಿಯಂತೆ! ಇದೊಂದು ಫ್ಯಾಂಟಸಿ ಸಿನಿಮಾ. ಎರಡು ಸಾವಿರ ದೃಶ್ಯಗಳನ್ನು ವಿಎಫ್ಎಕ್ಸ್‌ ಬಳಸಿ ಸಿದ್ಧಪಡಿಸಿರುವುದು ಇದರ ಮತ್ತೊಂದು ವಿಶೇಷ. ಬರೋಬ್ಬರಿ 200 ದಿನಗಳ ಕಾಲ ಚಿತ್ರದ ಶೂಟಿಂಗ್‌ ನಡೆಸಿರುವುದು ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ಹೊಸ ದಾಖಲೆ. ಮೂವತ್ತು ವರ್ಷದ ಹಿಂದೆ ನಡೆದ ಕಥೆಯನ್ನು ಆ ಕಾಲಘಟ್ಟಕ್ಕೆ ತಕ್ಕಂತೆ ಚಿತ್ರೀಕರಿಸಲಾಗಿದೆಯಂತೆ.

ಚಿತ್ರದಲ್ಲಿ ಬರುವ ಗ್ರಾಮದ ಹೆಸರು ಅಮರಾವತಿ. ಅಲ್ಲಿ ಸೃಷ್ಟಿಯಾಗುವ ಸಮಸ್ಯೆಗಳಿಗೆ ಪರಿಹಾರ ಹುಡುಕುವುದೇ ನಾರಾಯಣನ ಕೆಲಸ. ನಾರಾಯಣ ಪೊಲೀಸ್‌ ಅಧಿಕಾರಿ. ಆತ ಕಡುಭ್ರಷ್ಟನೂ ಹೌದು. ಆದರೆ, ತನ್ನ ಬುದ್ಧಿವಂತಿಕೆಯಿಂದ ಸಮಸ್ಯೆ ಪರಿಹರಿಸುವುದರಲ್ಲಿ ಆತ ನಿಸ್ಸೀಮ. ನಾರಾಯಣನ ಪ್ರಿಯತಮೆ ಲಕ್ಷ್ಮಿ ಪಾತ್ರದಲ್ಲಿ ಶಾನ್ವಿ ಶ್ರೀವಾಸ್ತವ ಕಾಣಿಸಿಕೊಂಡಿದ್ದಾರೆ.

ಮೂರು ವರ್ಷಗಳ ಹಿಂದೆ ರಕ್ಷಿತ್‌ ನಟನೆಯ ‘ಕಿರಿಕ್‌ ಪಾರ್ಟಿ’ ಚಿತ್ರ ಭರ್ಜರಿ ಗೆಲುವು ಕಂಡಿತ್ತು. ಆ ಬಳಿಕ ಅವರ ಯಾವುದೇ ಸಿನಿಮಾ ತೆರೆ ಕಂಡಿಲ್ಲ. ಹಾಗಾಗಿ, ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಎಚ್‌.ಕೆ.ಪ್ರಕಾಶ್‌ ಮತ್ತು ಪುಷ್ಕರ್‌ ಮಲ್ಲಿಕಾರ್ಜುನಯ್ಯ ಬಂಡವಾಳ ಹೂಡಿದ್ದಾರೆ. ಚರಣ್‌ ರಾಜ್‌ ಮತ್ತು ಬಿ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದಾರೆ. ಕರಂ ಚಾವ್ಲಾ ಅವರ ಛಾಯಾಗ್ರಹಣವಿದೆ. ಅಚ್ಯುತ್‌ ಕುಮಾರ್‌, ರಿಷಬ್‌ ಶೆಟ್ಟಿ, ಪ್ರಮೋದ್‌ ಶೆಟ್ಟಿ, ಬಾಲಾಜಿ ಮೋಹನ್‌, ಗೋಪಾಲಕೃಷ್ಣ ದೇಶ‍ಪಾಂಡೆ, ಮಧುಸೂದನ್‌ ರಾವ್, ಗೌತಮ್‌ ರಾಜ್‌, ಸಲ್ಮಾನ್‌ ಅಹಮ್ಮದ್‌, ಅನಿರುದ್ಧ್‌ ಮಹೇಶ್‌ ತಾರಾಗಣದಲ್ಲಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago