Featured

ಇದೊಂದು ಫೇಕ್‌‌ ವಿಡಿಯೋ ,ಒಂದು ವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ : ಸಹೋದರನ ಪರ ಬಾಲಚಂದ್ರ ಜಾರಕಿಹೊಳಿ  -Vishwanews24

ಇದೊಂದು ಫೇಕ್‌‌ ವಿಡಿಯೋ ,ಒಂದು ವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ : ಸಹೋದರನ ಪರ ಬಾಲಚಂದ್ರ ಜಾರಕಿಹೊಳಿ  -Vishwanews24

ಬೆಂಗಳೂರು, : “ಸಿಡಿಯಿಂದ ಆನೆಬಲ ಬಂದಿದೆ, ರಾಜೀನಾಮೆ ಕೊಡಲ್ಲ” ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್‌ ಮಾಡಿದ್ದಾರೆ.

“ಸಹೋದರನನ್ನು ರಾಜಕೀಯವಾಗಿ ಕುಗ್ಗಿಸಲು ಈ ರೀತಿಯಾದ ಬಲೆ ಹೆಣೆಯಲಾಗಿದೆ. ಇದೊಂದು ಫೇಕ್‌‌ ವಿಡಿಯೋ ಆಗಿದೆ. ಒಂದುವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ” ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು : ಸಿದ್ದರಾಮಯ್ಯ -Vishwanews24

ರಮೇಶ್‌ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯುವ ಬಗ್ಗೆ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಮೇಶ್‌‌ ಜಾರಕಿಹೊಳಿ ಅವರೊಂದಿಗೆ ನಿಂತಿದ್ದಾರೆ.

“ಅದೊಂದು ಫೇಕ್‌ ವಿಡಿಯೋ ಆಗಿದ್ದು, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಈ ವಿಚಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ” ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್‍ಐಆರ್ ದಾಖಲು -Vishwanews24

“ಇದು ಸೃಷ್ಟಿ ಮಾಡಿರುವ ನಕಲಿ ಸಿಡಿ ಆಗಿದೆ. ನಾವೆಲ್ಲರೂ ರಮೇಶ್‌ ಜಾರಕಿಹೊಳಿ ಅವರೊಂದಿಗಿದ್ದೇವೆ. ನಕಲಿ ಸಿಡಿಗೋಸ್ಕರ ರಾಜೀನಾಮೆ ನೀಡಿದ್ದೇ ಆದಲ್ಲಿ ಸಚಿವ ಸಂಪುಟವೇ ಖಾಲಿಯಾಗುತ್ತದೆ. ರಮೇಶ್‌ ಜಾರಕಿಹೊಳಿ ಅವರ ಕುಟುಂಬದ ವಿರುದ್ದ ರಾಜಕೀಯವಾದ ಷಡ್ಯಂತ್ರ ರೂಪಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ರಮೇಶ್‌ ಜಾರಕಿಹೊಳಿ ಕುಟುಂಬದ ವಿರುದ್ದ ಕಾಣದ ಶಕ್ತಿಗಳು ಷಡ್ಯಂತ್ರ ಮಾಡುತ್ತಿವೆ. ಸಿಎಂ ಅವರು ಇಂದು ಮಧ್ಯಾಹ್ನವೇ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಲಿದ್ದಾರೆ. ಅವಶ್ಯಕವಿದ್ದಲ್ಲಿ ಸುದ್ದಿಗೋಷ್ಠಿಯನ್ನು ಕೂಡಾ ನಡೆಸಲಿದ್ದಾರೆ. ಬಿಜೆಪಿಯ ಎಲ್ಲಾ ಶಾಸಕರು ರಮೇಶ್‌ ಜಾರಕಿಹೊಳಿ ಅವರ ಬೆಂಬಲವಾಗಿ ಇರುತ್ತೇವೆ. ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ನಾವು ಸುಮ್ಮನೆ ಕುಳಿತರೆ ಆಗುವುದಿಲ್ಲ. ನಾವು ಇದರ ವಿರುದ್ದ ಕಾನೂನು ಹೋರಾಟ ಮಾಡುತ್ತೇವೆ” ಎಂದಿದ್ದಾರೆ.

ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್, : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

4 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

4 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

4 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

4 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

4 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

19 hours ago