Featured

ಇನ್ನಾದರೂ ಶಾಂತಿಯುತ ಬದುಕಿಗೆ ಮರಳಿ ಬನ್ನಿ: ಕಾಶ್ಮೀರಿ ಜನರಿಗೆ ಬಿಪಿನ್ ರಾವತ್ ಮನವಿ -Vishwanews24

ನವದೆಹಲಿ: ‘ಕಣಿವೆ ರಾಜ್ಯದ ಜನರು ಶಾಂತಿ ಅನುಭವಿಸಿಲ್ಲ. ಇನ್ನಾದರೂ ಮನಸ್ಸು ಬದಲಿಸಿ. ಬಂದೂಕು ಕೆಳಗಿಡಿ, ಶಾಂತಿಯನ್ನು ಅಪ್ಪಿಕೊಳ್ಳಿ’ ಎಂದು ಭೂಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡಿದ್ದಾರೆ.

‘ಹಿಂದೂಸ್ತಾನ್ ಟೈಮ್ಸ್’ಗೆ ವಿಶೇಷ ಸಂದರ್ಶನ ನೀಡಿರುವ ರಾವತ್, 30 ವರ್ಷ ರಕ್ತ ಸುರಿಸಿ ಸಾಧಿಸಿದ್ದಾದರೂ ಏನು? ಇನ್ನಾದರೂ ಶಾಂತಿಯುತ ಬದುಕಿಗೆ ಮರಳಿ ಬನ್ನಿ ಎಂದು ವಿನಂತಿಸಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದತಿ ನಿರ್ಧಾರ ಮತ್ತು ಅದನ್ನು ಘೋಷಿಸಲು ಆರಿಸಿಕೊಂಡ ಸಮಯದ ಬಗ್ಗೆ ಕೇಂದ್ರ ಸರ್ಕಾರವನ್ನು ಶ್ಲಾಘಿಸಿರುವ ಅವರು, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದಿದ್ದಾರೆ.

‘ಪಾಕಿಸ್ತಾನವನ್ನು ಆರ್ಥಿಕ ಕಾರ್ಯಪಡೆಯು ಕಪ್ಪುಪಟ್ಟಿಗೆ ಸೇರಿಸಿದರೆ, ಆ ದೇಶವು ಒಂದು ರೀತಿಯಲ್ಲಿ ದಿಗ್ಬಂಧನ ಅನುಭವಿಸುವ ಸ್ಥಿತಿ ತಲುಪುತ್ತದೆ. ಈಗ ಪಾಕಿಸ್ತಾನವು ಉಗ್ರಗಾಮಿ ಸಂಘಗಳ ವಿರುದ್ಧ ಏನಾದರೂ ಮಾಡಲೇಬೇಕಾದ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕ್ರಮ‌ ಮಹತ್ವ ಪಡೆದುಕೊಳ್ಳುತ್ತದೆ’ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.

‘ಈ ಬಾರಿ ನಾವು ಉಗ್ರಗಾಮಿಗಳಿಗೂ ಶಾಂತಿಯುತ ಜೀವನಕ್ಕೆ ಮರಳಿಬರಲು ಅವಕಾಶ ಕೊಡುತ್ತಿದ್ದೇವೆ. ಅವರ ಬೆನ್ನಟ್ಟುತ್ತಿಲ್ಲ, ತಪಾಸಣೆ ಮತ್ತು ಗುಂಡಿನ ಚಕಮಕಿಗಳೂ ಕಡಿಮೆಯಾಗಿವೆ. ಯಾರದೋ ಮಾತು ಕೇಳಿ ಬದುಕು ಹಾಳುಮಾಡಿಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಿ.‌ ಬಂದೂಕು ಕೆಳಗಿಡಿ’ ಎಂದು ಕಿವಿಮಾತು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago