ನವದೆಹಲಿ: ‘ಕಣಿವೆ ರಾಜ್ಯದ ಜನರು ಶಾಂತಿ ಅನುಭವಿಸಿಲ್ಲ. ಇನ್ನಾದರೂ ಮನಸ್ಸು ಬದಲಿಸಿ. ಬಂದೂಕು ಕೆಳಗಿಡಿ, ಶಾಂತಿಯನ್ನು ಅಪ್ಪಿಕೊಳ್ಳಿ’ ಎಂದು ಭೂಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡಿದ್ದಾರೆ.
‘ಹಿಂದೂಸ್ತಾನ್ ಟೈಮ್ಸ್’ಗೆ ವಿಶೇಷ ಸಂದರ್ಶನ ನೀಡಿರುವ ರಾವತ್, 30 ವರ್ಷ ರಕ್ತ ಸುರಿಸಿ ಸಾಧಿಸಿದ್ದಾದರೂ ಏನು? ಇನ್ನಾದರೂ ಶಾಂತಿಯುತ ಬದುಕಿಗೆ ಮರಳಿ ಬನ್ನಿ ಎಂದು ವಿನಂತಿಸಿದ್ದಾರೆ.
ಸಂವಿಧಾನದ 370ನೇ ವಿಧಿ ರದ್ದತಿ ನಿರ್ಧಾರ ಮತ್ತು ಅದನ್ನು ಘೋಷಿಸಲು ಆರಿಸಿಕೊಂಡ ಸಮಯದ ಬಗ್ಗೆ ಕೇಂದ್ರ ಸರ್ಕಾರವನ್ನು ಶ್ಲಾಘಿಸಿರುವ ಅವರು, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದಿದ್ದಾರೆ.
‘ಪಾಕಿಸ್ತಾನವನ್ನು ಆರ್ಥಿಕ ಕಾರ್ಯಪಡೆಯು ಕಪ್ಪುಪಟ್ಟಿಗೆ ಸೇರಿಸಿದರೆ, ಆ ದೇಶವು ಒಂದು ರೀತಿಯಲ್ಲಿ ದಿಗ್ಬಂಧನ ಅನುಭವಿಸುವ ಸ್ಥಿತಿ ತಲುಪುತ್ತದೆ. ಈಗ ಪಾಕಿಸ್ತಾನವು ಉಗ್ರಗಾಮಿ ಸಂಘಗಳ ವಿರುದ್ಧ ಏನಾದರೂ ಮಾಡಲೇಬೇಕಾದ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕ್ರಮ ಮಹತ್ವ ಪಡೆದುಕೊಳ್ಳುತ್ತದೆ’ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.
‘ಈ ಬಾರಿ ನಾವು ಉಗ್ರಗಾಮಿಗಳಿಗೂ ಶಾಂತಿಯುತ ಜೀವನಕ್ಕೆ ಮರಳಿಬರಲು ಅವಕಾಶ ಕೊಡುತ್ತಿದ್ದೇವೆ. ಅವರ ಬೆನ್ನಟ್ಟುತ್ತಿಲ್ಲ, ತಪಾಸಣೆ ಮತ್ತು ಗುಂಡಿನ ಚಕಮಕಿಗಳೂ ಕಡಿಮೆಯಾಗಿವೆ. ಯಾರದೋ ಮಾತು ಕೇಳಿ ಬದುಕು ಹಾಳುಮಾಡಿಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಿ. ಬಂದೂಕು ಕೆಳಗಿಡಿ’ ಎಂದು ಕಿವಿಮಾತು ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…