ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.
ಎರಡು ದಿನಗಳ ಹಿಂದೆ ನಾಡು, ದೇಶ, ಧರ್ಮ, ಭಾಷೆ, ಸಿದ್ಧಾಂತಗಳ ವಿಚಾರದಲ್ಲಿ ತಮ್ಮ ನಿಲುವನ್ನು ಪ್ರಕಟಿಸಿದ್ದ ಬೆನ್ನಿಗೇ ಅವರು ಇದೀಗ ವೈವಾಹಿಕ ಬದುಕಿನ ಕುರಿತ ನಿರ್ಣಯವನ್ನೂ ಪ್ರಕಟಿಸಿದ್ದಾರೆ. ನಾಡು, ನುಡಿ, ದೇಶ, ಧರ್ಮದ ಕುರಿತು ಮಾತನಾಡಿದ್ದಕ್ಕೆ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದಲ್ಲದೆ ತೇಜೋವಧೆಗಳಾಗಿದ್ದರ ಬಗ್ಗೆ ಅವರು ತೀವ್ರ ಅಸಮಾಧಾನ ಹೊರಹಾಕಿದ್ದರು.
ತನ್ನನ್ನು ಸೈದ್ಧಾಂತಿಕವಾಗಿ, ವೈಚಾರಿಕವಾಗಿ ವಿರೋಧಿಸುವವರು ತನ್ನ ಕುಟುಂಬಸ್ಥರನ್ನು ಉದ್ದೇಶಿಸಿ ಅವಹೇಳನಕಾರಿ ಆಗಿ ಮಾತನಾಡುತ್ತಿದ್ದುದರ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನನ್ನ ಕುಟುಂಬಸ್ಥರ ಹಿತದ ದೃಷ್ಟಿಯಿಂದ ಇನ್ನು ನನ್ನ ಸಿದ್ಧಾಂತ, ನಾಡು-ನುಡಿ, ದೇಶ-ಧರ್ಮದ ಮೇಲಿನ ಅಭಿಮಾನ ಮನಸ್ಸಿನಲ್ಲಿ ಮಾತ್ರ ಇರಲಿದೆ, ಆ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂಬ ನಿರ್ಧಾರ ಎರಡು ದಿನಗಳ ಹಿಂದೆ ಪ್ರಕಟಿಸಿದ್ದರು.
ವಿಚ್ಛೇದನ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ ಎಂದು ಕಿರಿಕ್ ಕೀರ್ತಿ ತಮ್ಮ ವಿಚ್ಛೇದನವನ್ನು ಪ್ರಕಟಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…