ಹೊಸದಿಲ್ಲಿ: ಇನ್ನು ಎರಡು ವಾರಗಳ ಬಳಿಕ, ಅಂದರೆ ಜೂನ್ ದ್ವಿತೀಯಾರ್ಧದಲ್ಲಿ ರಾಷ್ಟ್ರೀಯ ಕ್ರಿಕೆಟ್ ಶಿಬಿರಗಳನ್ನು ಆರಂಭಿಸಲು ಕಾಲ ಪಕ್ವವಾದೀತು ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ತಂಡ ತನ್ನ ಕೊನೆಯ ಪೂರ್ಣ ಪ್ರಮಾಣದ ಸರಣಿಯನ್ನು ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ ಆಡಿತ್ತು. ಅನಂತರದ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಕೋವಿಡ್-19 ದಿಂದಾಗಿ ಅರ್ಧದಲ್ಲೇ ಕೊನೆಗೊಂಡಿತು. ಬಹು ನಿರೀಕ್ಷೆಯ ಐಪಿಎಲ್ ಕೂಡ ಮುಂದೂಡಲ್ಪಟ್ಟಿತು. ಸದ್ಯ ಲಾಕ್‌ಡೌನ್‌ನಿಂದಾಗಿ ಕ್ರಿಕೆಟಿಗರೆಲ್ಲ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಈಗಾಗಲೇ ಬೇರೆ ಬೇರೆ ದೇಶಗಳ ಕ್ರಿಕೆಟಿಗರು ಹೊರಾಂಗಣ ಅಭ್ಯಾಸ ಆರಂಭಿಸಿದ ಕಾರಣ ಬಿಸಿಸಿಐ ಕೂಡ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದೆ ಎಂದು ಅರುಣ್ ಧುಮಾಲ್ ಹೇಳಿದರು. ಮಂಡಳಿಯ ಗುತ್ತಿಗೆ ವ್ಯಾಪ್ತಿಯ ಆಟಗಾರರಿಗೆ ಅಭ್ಯಾಸ ಶಿಬಿರವನ್ನು ಆಯೋಜಿಸುವುದು ಬಿಸಿಸಿಐನ ಮೊದಲ ಗುರಿಯಾಗಿದೆ. ಎನ್‌ಸಿಎ ಮತ್ತು ಇತರ ಕೆಲವೇ ನಿಗದಿತ ಕ್ರಿಕೆಟ್ ಕೇಂದ್ರಗಳನ್ನು ಗುರುತಿಸಿ ಅಲ್ಲಿ ಶಿಬಿರಗಳನ್ನು ಆಯೋಜಿಸುವುದು ಬಿಸಿಸಿಐ ಮುಂದಿರುವ ಯೋಜನೆ ಯಾಗಿದೆ ಎಂದು ಅವರು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…