ಮಂಗಳೂರು, : ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬೆರಳಚ್ಚು ಬಯೋಮೆಟ್ರಿಕ್ ಬದಲಿಗೆ ಆಧಾರ್ ಆಧರಿತ ಮೊಬೈಲ್ ಒಟಿಪಿ ಮೂಲಕ ಪಡಿತರ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ.
ಬುಧವಾರದಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಇದು ಮುಂದಿನ ಆದೇಶದವರ್ಗೆ ಜಾರಿಯಲ್ಲಿರುತ್ತದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಆನ್ಲೈನ್ ಮೂಲಕ ಫಲಾನುಭವಿಗಳ ಬೆರಳಚ್ಚು ಪಡೆದು ಪಡಿತರ ವಿತರಿಸುತ್ತಿದ್ದು, ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹೀಗಾಗಿ ಪಡಿತರ ಪಡೆಯಲು ಬರುವವರು ಆಹಾರ ಇಲಾಖೆಯಲ್ಲಿ ನೋಂದಣಿಯಾಗಿರುವ ತಮ್ಮ ದೂರವಾಣಿ ಸಂಖ್ಯೆ ಇರುವ ಮೊಬೈಲ್ ಪೋನ್ ನನ್ನು ತೆಗೆದುಕೊಂಡುಬರಬೇಕು. ಆಧಾರ್ ನಲ್ಲಿ ಮೊಬೈಲ್ ನೋಂದಣಿ ಆಗಿಲ್ಲದಿದ್ದರೆ ಬಯೋಮೆಟ್ರಿಕ್ ಬಳಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…