ಮಂಗಳೂರು,: ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ ಇದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೃಢಪಟ್ಟಿದೆ. ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವ ಜನರು ಕೂಡ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.
ಪತ್ರಿಕಾಗೋಷ್ಟಿ ನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧರ್ಮದ ಮತ್ತು ಸೈನಿಕರ ಹೆಸರಿನಲ್ಲಿ ಗೆಲುವು ಸಾಧಿಸಿದರು. ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಮತ್ತು ಪ್ರಾದೇಶಿಕ ಸಮಸ್ಯೆಗಳ ಪರಿಹಾರದ ದೃಷ್ಟಿಯಲ್ಲಿ ಮತ ಯಾಚಿಸಲಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ. ಎಂದರು.
ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,ಬಿಜೆಪಿ ಪಕ್ಷ ಪ್ರತೀ ಹಬ್ಬಕ್ಕೂ ದಿನ ನಿಗದಿ ಮಾಡ್ತಾ ಇದ್ದಾರೆ.ಎಲ್ಲಾ ಹಬ್ಬಕ್ಕೂ ದಿನ ನೀಡ್ತಾ ಇದ್ರುರಂಜಾನ್ ಹಬ್ಬ ಮರೆತಿರಬೇಕು ಇಲ್ಲಂದ್ರೆ ಆ ದಿನವೂ ನಿಗದಿ ಮಾಡ್ತಾ ಇದ್ರು. ಬಿಜೆಪಿ ಕೇವಲ ಆಸೆಯಲ್ಲಿ ಕುಳಿತಿದೆ.ನಮ್ಮ ಮೈತ್ರಿ ಸರಕಾರ ಭದ್ರವಾಗಿದೆ ಎಂದರು. ಬಿಜೆಪಿಗೆ ಬೆಂಗಳೂರಿನಲ್ಲಿ ನಾಲ್ಕು ಕಾರ್ಪೊರೇಟರ್ ಒಗ್ಗೂಡಿಸಲಾಗಿಲ್ಲ. ಹೀಗಿರುವಾಗ 15 ಶಾಸಕರನ್ನು ಒಗ್ಗೂಡಿಸಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು ಇನ್ನು ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…