Featured

ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

ಮೈಸೂರು: ‘ನೀವೇ ನಮ್ಮ ನಾಯಕರು ಅಂತಲೇ ಹೇಳುತ್ತಾ ಬಂದಿದ್ದೇನೆ. ನಾನು ಯಾವತ್ತೂ ನಿಮ್ಮ ಜತೆ ಪೈಪೋಟಿ ಮಾಡಿಲ್ಲ. ಬನ್ನಿ, ನಾಳೆಯೇ ಜವಾಬ್ದಾರಿ ಹೊತ್ತುಕೊಳ್ಳಿ. ಎಚ್‌.ಡಿ.ಕುಮಾರಸ್ವಾಮಿ ಜತೆ ಸೇರಿಕೊಂಡು ಪಕ್ಷವನ್ನು ಕಟ್ಟಿ’ ಎಂದು ಶಾಸಕ ಸಾ.ರಾ.ಮಹೇಶ್‌ ಅವರು ಪಕ್ಷದ ಚಟುವಟಿಕೆಗಳಿಂದ ದೂರವಾಗಿರುವ ಜಿ.ಟಿ.ದೇವೇಗೌಡ ಅವರಿಗೆ ಆಹ್ವಾನ ನೀಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನೀವು ಸಕ್ರಿಯವಾಗಿಲ್ಲ ಎಂಬ ಕಾರಣ ನಾನು ಸ್ವಲ್ಪ ಓಡಾಡುತ್ತಿದ್ದೇನೆ. ನನ್ನ ಈ ಓಡಾಟದಿಂದ ನಿಮಗೆ ನೋವಾಗಿದ್ದರೆ ದೂರ ಸರಿಯುವೆ. ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಪ್ರಮಾಣ ಮಾಡಿ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನೀವು ಕಾರ್ಯಕರ್ತರ ಜತೆ ಸೇರಿಕೊಂಡು ಪಕ್ಷವನ್ನು ಉಳಿಸುವ ಕೆಲಸ ಮಾಡಿ’ ಎಂದು ಭಾವುಕರಾಗಿ ಕಣ್ಣೀರು ಹಾಕಿದರು.

ಇದನ್ನೂ ಓದಿ : ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

‘ನೀವು‍ ಪದೇ ಪದೇ ನನ್ನನ್ನು ಟೀಕಿಸುತ್ತಿದ್ದೀರಿ. ಎಷ್ಟೇ ಟೀಕೆ ಮಾಡಿದರೂ ನಿಮ್ಮ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ನಾನು ಏನು ಅನ್ಯಾಯ ಮಾಡಿದ್ದೇನೆ, ನಿಮ್ಮ ಜತೆ ಇರುವ ಕಾರ್ಯಕರ್ತರಲ್ಲಿ ನಾನೂ ಒಬ್ಬ ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ, ನನ್ನ ಮೇಲೆ ದ್ವೇಷ ಏಕೆ? ಎಂದು ಭಾವುಕರಾದರು.

‘ಪದೇ ಪದೇ ನಮ್ಮ ವಿರುದ್ಧ ಮಾತನಾಡಿದರೆ ಎಷ್ಟು ಅಂತ ಸಹಿಸೋದು? ನನಗೂ ರಾಜಕಾರಣ ಬೇಸರ ಆಗಿದೆ. ಈ ಜಿಲ್ಲೆಯಲ್ಲಿ ಪಕ್ಷವನ್ನು ಉಳಿಸಿಬೇಕು ಎಂದು ಹೋರಾಟ ಮಾಡುತ್ತಿದ್ದೇವೆ. ನನ್ನಿಂದ ತ‍ಪ್ಪು ಆಗಿದ್ದರೆ ಈ ಅವಧಿ ಮುಗಿದ ಕೂಡಲೇ ರಾಜಕೀಯ ಮತ್ತು ಸಾರ್ವಜನಿಕ ಜೀವದಿಂದ ನಿವೃತ್ತಿಯಾಗುತ್ತೇನೆ’ ಎಂದರು.

ಇದನ್ನೂ ಓದಿ : ಉಡುಪಿ: ಅಜ್ಜರಕಾಡಿನಲ್ಲಿ 10 ದಿನಗಳ ಸೇನಾ ನೇಮಕಾತಿ ರ‍್ಯಾಲಿಗೆ ಚಾಲನೆ -Vishwanews24

‘ಮೈಮುಲ್‌ ಚುನಾವಣೆಯಲ್ಲಿ ನಾವು ಅಭ್ಯರ್ಥಿಗಳನ್ನು ಹಾಕದೇ ಇದ್ದರೆ ಅವಿರೋಧ ಆಯ್ಕೆ ನಡೆಯುತ್ತಿತ್ತು. ಆದರೆ ನಾವು ಕಣಕ್ಕಿಳಿದ ಕಾರಣ 15 ರಲ್ಲಿ ಮೂರು ಸ್ಥಾನಗಳು ಲಭಿಸಿವೆ. ಈ ಫಲಿತಾಂಶ ಸಮಾಧಾನ ನೀಡಿದೆ’ ಎಂದರು.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

27 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

29 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

37 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

47 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago