Featured

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ

ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು ಪುರಾತನ ಕಲ್ಲಿನ ವಿಗ್ರಹವು ಕ್ರಮೇಣ ಸವೆದು ಹೋಗುತ್ತಿರುವ ಹಿನ್ನೆಲೆಯಲ್ಲಿ, ಭಕ್ತರು ವಿಗ್ರಹವನ್ನು ಸ್ಪರ್ಶಿಸಿ ಪೂಜೆ ಸಲ್ಲಿಸುವುದನ್ನು ನಿಷೇಧಿಸಿ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಲವಾರ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನದ ಅರ್ಚಕರು ಹಾಗೂ ಸಾರ್ವಜನಿಕರ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಅವರು, ಶಿಫ್ಟ್‌ ಇನ್‌ಚಾರ್ಜ್ ಅರ್ಚಕರನ್ನು ಹೊರತುಪಡಿಸಿ ಇತರ ಯಾವುದೇ ಅರ್ಚಕರು, ವಿಐಪಿಗಳು ಅಥವಾ ಭಕ್ತರಿಗೆ ಗರ್ಭಗುಡಿಯೊಳಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಭಕ್ತರು ವಿಗ್ರಹಕ್ಕೆ ಅಭಿಷೇಕ ಮಾಡುವುದಾಗಲಿ ಅಥವಾ ಸ್ಪರ್ಶಿಸುವುದಾಗಲಿ ನಿಷೇಧಿಸಲಾಗಿದೆ. ಅವರು ದೂರದಿಂದಲೇ ದೇವರ ದರ್ಶನ ಪಡೆಯಬಹುದು ಎಂದು ತಿಳಿಸಿದರು.

ಆರತಿಯನ್ನು ಗರ್ಭಗುಡಿಯ ಹೊರಗಡೆಯಿಂದಲೇ ನೆರವೇರಿಸಬಹುದು. ಮುಂದಿನ ಆದೇಶದವರೆಗೆ ಈ ನಿರ್ಬಂಧಗಳು ಜಾರಿಯಲ್ಲಿರಲಿವೆ ಎಂದು ಸುಧಾ ತಲವಾರ ಹೇಳಿದರು.

ಸಾವಿರಾರು ವರ್ಷಗಳಷ್ಟು ಹಳೆಯದಾದ ಈ ವಿಗ್ರಹವು ನಿರಂತರ ಸ್ಪರ್ಶದಿಂದ ಸವೆದು ಹೋಗುತ್ತಿರುವುದರಿಂದ, ವಿಗ್ರಹವನ್ನು ಸ್ಪರ್ಶಿಸಿ ಪೂಜೆ ಸಲ್ಲಿಸುವುದು ಮತ್ತು ದರ್ಶನ ಪಡೆಯುವುದನ್ನು ನಿಷೇಧಿಸಬೇಕು ಎಂದು ಸ್ಥಳೀಯ ನಿವಾಸಿಗಳು ಸೇರಿದಂತೆ ಅನೇಕ ಭಕ್ತರು ಬೇಡಿಕೆ ಸಲ್ಲಿಸಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago