Featured

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ – vishwanews24

ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿ ಬಿಡುಗಡೆ

ನವದೆಹಲಿ: ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೇ  ತಿಳಿಸಿದೆ.

ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1 ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್  ಬಿಡುಗಡೆಯಾಗಲಿದೆ.

ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಒಂದು ವೇಳೆ ವೇಟಿಂಗ್‌ ಲಿಸ್ಟ್‌ನಲ್ಲಿದ್ದ ಪ್ರಯಾಣಿಕರಿಗೆ ಟಿಕೆಟ್‌ ಸಿಗದೇ ಇದ್ದರೆ ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಮಾಡಲು ಸಮಯ ಸಿಗಲಿದೆ.

ಜುಲೈ 1 ರಿಂದ 2025 ರಿಂದ ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ.

ತಾತ್ಕಾಲ್ ಬುಕ್ಕಿಂಗ್‌ಗಳಿಗಾಗಿ ಒಟಿಪಿ ಆಧಾರಿತ ದೃಢೀಕರಣದ ಅನುಷ್ಠಾನವು ಜುಲೈ ಕೊನೆಯಿಂದ ಆರಂಭವಾಗಲಿದೆ. ಬಳಕೆದಾರರು ಆಧಾರ್ ಅಥವಾ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಸಂಗ್ರಹವಾಗಿರುವ ಇತರ ಮಾನ್ಯ ಸರ್ಕಾರಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕಾಗುತ್ತದೆ.

ಈ ಹಿಂದೆ ಆಧಾರ್-ಪ್ರಮಾಣೀಕೃತ ಬಳಕೆದಾರರು ಮಾತ್ರ ಜುಲೈ 1 ರಿಂದ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಿಸಿತ್ತು.

ಸೆಪ್ಟೆಂಬರ್‌ ವೇಳೆ ಪ್ರಯಾಣಿಕರ ಹೊಸ ರಿಸರ್ವೇಷನ್‌ ವ್ಯವಸ್ಥೆ ಜಾರಿಗೆ ಬರಲಿದೆ. ಸದ್ಯ ಪ್ರತಿ ನಿಮಿಷಕ್ಕೆ 32 ಸಾವಿರ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದು. ಆದರೆ ವೆಬ್‌ಸೈಟ್‌ ನವೀಕರಣಗೊಳಿಸಿದ ಬಳಿಕ ಪ್ರತಿ ನಿಮಿಷಕ್ಕೆ 1.50 ಲಕ್ಷ ಟಿಕೆಟ್‌ ಬುಕ್‌ ಮಾಡುವಂತೆ ಅಪ್‌ಗ್ರೇಡ್‌ ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ಬಹು ಭಾಷೆಗಳನ್ನು ಬೆಂಬಲಿಸುವ ಬಳಕೆದಾರ ಸ್ನೇಹಿ ಇಂಟರ್ಫೇಸ್ ಇರಲಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago