ನವದೆಹಲಿ :ವಾಟ್ಸಪ್ ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.
ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಹೀಗಾಗಿ ಖಾಸಗಿತನ ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ರೀತಿಯ ದುರುಪಯೋಗ ಆಗುವುದನ್ನು ತಪ್ಪಿಸಲು ಮತ್ತು ಪ್ರೈವೆಸಿಗಾಗಿ ವಾಟ್ಸಪ್ ಫಿಂಗರ್ ಪ್ರಿಂಟ್ ದೃಢೀಕರಣವನ್ನು ಸೇರಿಸಲು ಮುಂದಾಗಿದೆ.
ಆರಂಭದಲ್ಲಿ ಈ ವಿಶೇಷತೆ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು ನಂತರ ಐಓಎಸ್ ಬಳಕೆದಾರರಿಗೆ ಸಿಗಲಿದೆ. ಆಂಡ್ರಾಯ್ಡ್ ಮಾರ್ಶ್ ಮೆಲ್ಲೋ ಮತ್ತು ನಂತರ ಬಿಡುಗಡೆಯಾಗಿರುವ ಎಲ್ಲ ಆಪರೇಟಿಂಗ್ ಸಿಸ್ಟಂಗಳಿಗೆ ಅಪ್‍ಡೇಟ್ ಆಗಲಿರುವ ವಾಟ್ಸಪ್ ಆ್ಯಪ್ ಬೆಂಬಲ ನೀಡಲಿದೆ ಎಂದು ವಾಟ್ಸಪ್‍ಬೀಟಾಇನ್ಫೋ ವರದಿ ಮಾಡಿದೆ.
ಇದಲ್ಲದೆ ‘ಫೇಸ್ ಐಡಿ’ ಫೀಚರ್ ಕೂಡಾ ಪರಿಚಯಿಸಲು ಮುಂದಾಗಿದೆ. ವ್ಯಾಟ್ಸಪ್ ಆ್ಯಪ್ ಲಾಕ್-ಅನ್‌ಲಾಕ್ ಮಾಡುವ ಫೀಚರ್ ಆಗಿದ್ದು, ಫೋನ್ ಲಾಕ್ ತೆಗೆಯಲು ಫಿಂಗರ್ ಪ್ರಿಂಟ್ ಸೆನ್ಸರ್ ಬಳಕೆಯಾಗುವಂತೆ ಇದು ಕಾರ್ಯ ನಿರ್ವಹಿಸುತ್ತದೆ. ಒಂದು ವೇಳೆ ಮುಖ ಅಥವಾ ಫಿಂಗರ್ ಪ್ರಿಂಟ್ ಗುರುತು ಸ್ವೀಕರಿಸದಿದ್ದಲ್ಲಿ ಪಾಸ್ಕೋಡ್ ಹಾಕಬೇಕಾಗುತ್ತದೆ ಇದರಿಂದ ಬಳಕೆದಾರರ ಖಾಸಗಿ ಸಂದೇಶಗಳಿಗೆ ಹೆಚ್ಚಿನ ರಕ್ಷಣೆ ದೊರಕಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…