ಇನ್ನು ಮುಂದೆ ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ -Vishwanews24

ಬೆಂಗಳೂರು: 60 ವರ್ಷ ದಾಟಿದವರು ಇನ್ನು ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಸ್ವಯಂ ಸರಕಾರವೇ ಫಲಾನುಭವಿಗಳನ್ನು ಗುರುತಿಸಿ ಮನೆಗೇ ಪಿಂಚಣಿ ಕಳುಹಿಸುತ್ತದೆ.

ಆಧಾರ್‌ ಕಾರ್ಡ್‌ನಲ್ಲಿ ನಮೂದಾಗಿರುವ ವಯಸ್ಸಿನ ಆಧಾರದಲ್ಲಿ 60 ವರ್ಷ ಮೀರುತ್ತಿದ್ದಂತೆಯೇ ಫಲಾನುಭವಿಗಳನ್ನು ಸ್ವಯಂಚಾಲಿತವಾಗಿ ಗುರುತಿಸುವ ವ್ಯವಸ್ಥೆಯನ್ನು ಸರಕಾರ ಮಾಡಿದೆ.

ಕಂದಾಯ ಸಚಿವ ಆರ್‌. ಆಶೋಕ ಅವರು ಬುಧವಾರ ಜಿಲ್ಲಾಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

”ಇನ್ನೊಂದು ವಾರದೊಳಗೆ ಈ ಯೋಜನೆಗೆ ಉಡುಪಿ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು. ಅಂಚೆ ಇಲಾಖೆಯ ಸಹಕಾರದೊಂದಿಗೆ ಯೋಜನೆ ಸಾಕಾರಗೊಳ್ಳಲಿದ್ದು, ನಾನೇ ಖುದ್ದಾಗಿ 3000 ಫಲಾನುಭವಿಗಳ ವಿಳಾಸಕ್ಕೆ ಆಯ್ಕೆ ಪತ್ರವನ್ನು ಪೋಸ್ಟ್‌ ಮಾಡುವ ಮೂಲಕ ಚಾಲನೆ ನೀಡುತ್ತೇನೆ,” ಎಂದು ಹೇಳಿದರು.

ಮನೆ ಬಾಗಿಲಿಗೇ ಅಂಚೆ
ಅರ್ಹ ಫಲಾನುಭವಿಗಳಿಗೆ ಅಂಚೆ ಇಲಾಖೆ ಮೂಲಕ ಮನೆಗೇ ಹಣವನ್ನು ತಲುಪಿಸಲಾಗುತ್ತದೆ. ರಾಜ್ಯದಲ್ಲಿ ಪ್ರತಿ ಎರಡು ಗ್ರಾಮಕ್ಕೊಂದರಂತೆ ಇರುವ ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ಲಿ. (ಐಪಿಪಿಬಿಎಲ್‌) ಇದರ ಸಿಬ್ಬಂದಿಗಳು ಫಲಾನುಭವಿಗಳ ಮನೆಗೇ ಹೋಗಿ ಖಾತೆಯನ್ನು ತೆರೆಯಲಿದ್ದಾರೆ. ಫಲಾನುಭವಿಗಳು ತಮ್ಮ ಬೆರಳಚ್ಚು ನೀಡಿದರೆ ಸಾಕು, ಮೊದಲೇ ನೀಡಿದ್ದ ಆಧಾರ್‌ ಸಂಖ್ಯೆ ಆಧಾರದಲ್ಲಿ ವಿಳಾಸವನ್ನು ಗುರುತಿಸಿ ಖಾತೆ ರೂಪುಗೊಳ್ಳುತ್ತದೆ.

ಫಲಾನುಭವಿಗಳಿಗೆ ಅಂಚೆಯಲ್ಲಿ ಸಂದೇಶ
ಆಧಾರ್‌ ಕಾರ್ಡ್‌ ಆಧಾರದ ಮೇಲೆ ಯಾರಿಗೆ ಅರವತ್ತು ವರ್ಷ ಭರ್ತಿಯಾಗಿದೆ ಎಂಬುದನ್ನು ರಾಜ್ಯ ಸರಕಾರವೇ ಪತ್ತೆ ಹಚ್ಚುತ್ತದೆ. ವೃದ್ಧಾಪ್ಯ ವೇತನಕ್ಕೆ ನಿಗದಿಪಡಿಸಿದ ಆದಾಯ ಮಿತಿ, ರೇಷನ್‌ ಕಾರ್ಡ್‌ ಮತ್ತಿತರ ಮಾನದಂಡಗಳ ಆಧಾರದಲ್ಲಿ ವ್ಯಕ್ತಿಗಳು ಅರ್ಹರೆಂದು ಕಂಡುಬಂದರೆ ಸರಕಾರವೇ ಅಂಚೆ ಮೂಲಕ ಪತ್ರ ಕಳಿಸಿ ವೃದ್ಧಾಪ್ಯ ವೇತನ ಪಡೆಯಲು ಅರ್ಹರಾಗಿದ್ದೀರಿ ಎಂಬ ಸಂದೇಶವನ್ನು ರವಾನಿಸುತ್ತದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

14 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

14 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

14 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

15 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

17 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

18 hours ago