ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ.
ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ ಹೆಚ್ಚಿಸಬೇಕೆಂಬ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ.
ಮುಂದಿನ ಕೆಲವೇ ದಿನಗಳಲ್ಲಿ ವಾರದಲ್ಲಿ 6 ದಿನ ಮಂಗಳೂರು-ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ.
ರೈಲು ಸಂಖ್ಯೆ 16585/586 ಬೆಂಗಳೂರು- ಮಂಗಳೂರು ರೈಲಿನ ಸಂಚಾರವನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ಜುಲೈ 27 ರಂದು ರೈಲ್ವೇ ಮಂಡಳಿಗೆ ಪತ್ರ ಬರೆದಿತ್ತು.
ಈ ಪತ್ರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಸಚಿವಾಲಯವು ಆಗಸ್ಟ್ 17 ರಂದು ರೈಲು ಸಂಖ್ಯೆ 06547/548 ರ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸೇವೆಗಳನ್ನು ಕ್ರಮಬದ್ಧಗೊಳಿಸುವ ಮೂಲಕ ರೈಲು ಸಂಚಾರವನ್ನು ವಾರಕ್ಕೆ ಆರು ದಿನಗಳವರೆಗೆ ಹೆಚ್ಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ.
ಇದೇ ವೇಳೆ 16585/586 ಬೆಂಗಳೂರು- ಮಂಗಳೂರು ರೈಲಿನ ಟರ್ಮಿನಲ್ ಸದ್ಯ ಇರುವ ಕೆಎಸ್‌ಆರ್‌ಅಂದರೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ಜಂಕ್ಷನ್‌ನಿಂದ ಎಸ್‌ಎಂವಿಬಿ ಅಂದರೆ ಸರ್‌ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೈಯಪ್ಪನ ಹಳ್ಳಿಗೆ ವಿಸ್ತರಿಸಲಾಗಿದೆ.
ಟರ್ಮಿನಲ್ ಬದಲಾವಣೆ ಆಗಿದ್ದರೂ ಬೆಂಗಳೂರು ಸಿಟಿ, ಕಂಟೋನ್ಮೆಂಟ್, ಸಿಟಿ ಮತ್ತು ಕೆಂಗೇರಿ ಸೇರಿದಂತೆ ಈ ಹಿಂದಿನ ಮಾರ್ಗದಲ್ಲಿಯೇ ಸಂಚರಿಸಲಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…