ನವದೆಹಲಿ: ಲೋಕಸಭೆಯಲ್ಲಿ ರಾಜ್ಯದ ಸಂಸದರೆಲ್ಲ ಪ್ರಮಾಣವಚನ ಸ್ವೀಕರಿಸಿದ್ದರೂ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಾತ್ರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ.
ಅವರು ಶುಭ ಗಳಿಗೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಪ್ರಜ್ವಲ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿಲ್ಲ ಎನ್ನಲಾಗಿದೆ. ರಾಜ್ಯದ ಸಂಸದರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಕರೆಯಲಾಗಿದೆ. ಆದರೆ ಅವರು ಹಾಜರಾಗಿರಲಿಲ್ಲ.
ಪ್ರಜ್ವಲ್ ರೇವಣ್ಣ ಶುಕ್ರವಾರ 2.30 ರ ಬಳಿಕ ಪ್ರಮಾಣವಚನಕ್ಕೆ ಸಮಯ ನೀಡುವಂತೆ ಲೋಕಸಭೆ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಅವರು ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಹೇಳಲಾಗಿದ್ದರೂ, ಸಚಿವ ಹೆಚ್.ಡಿ.ರೇವಣ್ಣ ನಿಗದಿಪಡಿಸಿದ ಶುಭ ಮುಹೂರ್ತಕ್ಕಾಗಿ ಅವರು ಕಾಯುತ್ತಿದ್ದಾರೆ. ಶುಕ್ರವಾರ ಮಧ್ಯಾಹ್ನದ ಬಳಿಕ ಶುಭ ಮುಹೂರ್ತದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ನಿವಾಸದಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…