Featured

ಇನ್ನೆರಡು ವರ್ಷದಲ್ಲಿ ಶೇ. 100 ರಷ್ಟು ಖಚಿತ ನಾವು ವಾಪಸ್​ ಅಧಿಕಾರಕ್ಕೆ ಬರುತ್ತೇವೆ : ಸಿದ್ದರಾಮಯ್ಯ -Vishwanews24

ಇನ್ನೆರಡು ವರ್ಷದಲ್ಲಿ ಶೇ. 100 ರಷ್ಟು ಖಚಿತ ನಾವು ವಾಪಸ್​ ಅಧಿಕಾರಕ್ಕೆ ಬರುತ್ತೇವೆ : ಸಿದ್ದರಾಮಯ್ಯ -Vishwanews24

ಮೈಸೂರು: ಇನ್ನೆರಡು ವರ್ಷದಲ್ಲಿ ಶೇ. 100 ರಷ್ಟು ಖಚಿತ ನಾವು ವಾಪಸ್​ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಗ್ರಾಮದ ದೇವಾಲಯ ಉದ್ಘಾಟನೆ ವೇಳೆ ಮಾತನಾಡಿದ ಅವರು, ಮತ್ತೆ ಕಾಂಗ್ರೆಸ್​ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಅಷ್ಟೇ ಅಲ್ಲದೇ ನಾವು ಅಧಿಕಾರಕ್ಕೆ ಬಂದು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಿಸಿದರು. ಇದೇ ವೇಳೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು ಸಂಗೊಳ್ಳಿ ರಾಯಣ್ಣ ಹುಟ್ಟಿದ ಹಾಗೂ ಮೃತರಾದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು‌ ನಾನು ಮುಂದಾಗಿದ್ದೆ‌. ಇದಕ್ಕೆ 260 ಕೋಟಿ ಕೊಟ್ಟಿದ್ದೆ. ಅಷ್ಟರಲ್ಲಿ ನಮ್ಮ ಸರ್ಕಾರ ಹೊಯ್ತು. ಈಗಲಾದ್ರು ಹಣ ಬಿಡುಗಡೆ ಮಾಡಿಸಿ ಎಲ್ಲ ಕೆಲಸ ಮುಗಿಸಯ್ಯ ಎಂದು ಅದೇ ವೇದಿಕೆಯಲ್ಲಿ ಹಾಜರಿದ್ದ ಸಚಿವ ಆರ್.ಶಂಕರ್‌ಗೆ ತಾಕೀತು ಮಾಡಿದರು.

ಉಡುಪಿ : ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಇದೇ ವೇಳೆ ಸರ್ಕಾರದಲ್ಲಿ ನೀವು ಮೂರು‌ ಜನ ಮಂತ್ರಿಗಳಿದ್ದೀರಿ ಎಲ್ಲ ಸೇರಿಕೊಂಡು ಬಿಡುಗಡೆ ಮಾಡಿಸಿ ಅಂತ ಹೇಳಿದರು. ಈ ವೇಳೆ ಸಭೆಯಲ್ಲಿದ್ದವರು ನಾಲ್ಕು ಜನ ಕುರುಬ ಮಂತ್ರಿಗಳು ಸರ್ ಎಂದು ಮಾಹಿತಿ ನೀಡಿದಾಗ, ಇನ್ನೊಬ್ಬ ಯಾರಯ್ಯ? ಓಹ್… ಆ ಈಶ್ವರಪ್ಪ.. ಅವನಾ? ಸರಿ ಸರಿ ನಾಲ್ಕು ಜನ ಕುರುಬ‌ ಮಂತ್ರಿಗಳಿದ್ದಿರಾ. ಎಲ್ಲರು ಸೇರಿಕೊಂಡು ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ ಹಣ ಬಿಡುಗಡೆ ಮಾಡಿಸಿ. ಎಲ್ಲರೂ ಯಡಿಯೂರಪ್ಪ ಕುತ್ತಿಗೆ ಮೇಲೆ ಕುಳಿತು ಕೆಲಸ ಮಾಡಿಸಿ, ಇನ್ನೆರಡು ವರ್ಷದಲ್ಲಿ ಬಿಡುಗಡೆ ಮಾಡಿಸದಿದ್ದರೆ ನಾವೇ ಬಂದು ಹಣ ಬಿಡುಗಡೆ ಮಾಡುತ್ತೇವೆ ಎನ್ನುವ ಮೂಲಕ ಮುಂದಿನ ಸರ್ಕಾರ ತಮ್ಮದೇ ಎಂದು ಭರವಸೆ ವ್ಯಕ್ತಪಡಿಸಿದರು.

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago