ಬೆಂಗಳೂರು: ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು ಮೋದಿ ಇಟ್ಟಿದ್ದಾರೆ.
ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಚಂದ್ರಯಾನ-3 ಮಿಷನ್‍ನ ಯಶಸ್ಸಿನ ಬಳಿಕ ಖಾಸಗಿ ಬಾಹ್ಯಾಕಾಶ ಉಡಾವಣೆಗಳು ಮತ್ತು ಸಂಬಂಧಿತ ಉಪಗ್ರಹ ಆಧಾರಿತ ವ್ಯವಹಾರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲಿದೆ. ಈ ಮೂಲಕ ಕೇಂದ್ರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…