Featured

ಗ್ರಾಮೀಣ ಪ್ರದೇಶಗಳಲ್ಲಿ ಇನ್ಮುಂದೆ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ – vishwanews24

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್

ನವದೆಹಲಿ:  ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ ಅವಧಿಯನ್ನ 45 ದಿನಗಳಿಂದ 25 ದಿನಗಳಿಗೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಸುರೇಶ್ ಗೋಪಿ ಘೋಷಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಗ್ರಾಹಕರಿಗೂ 25 ದಿನಗಳಿಗೊಮ್ಮೆ ಎಲ್‌ಪಿಜಿ ರಿಫಿಲ್ ಬುಕ್ ಮಾಡುವ ಅವಕಾಶವನ್ನ ತಕ್ಷಣದಿಂದಲೇ ಜಾರಿಗೆ ತರಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ಎಲ್‌ಪಿಜಿ ಪೂರೈಕೆಯ ಮೇಲೆ ಉಂಟಾಗಿದ್ದ ಒತ್ತಡದಿಂದಾಗಿ ರಿಫಿಲ್ ಬುಕ್ಕಿಂಗ್ ಅವಧಿಯನ್ನ ಪರಿಷ್ಕರಿಸಲಾಗಿತ್ತು. ಆದರೆ, ಪ್ರಸ್ತುತ ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸುಧಾರಿಸಿದ್ದು, ರಿಫಿಲ್ ಬಾಕಿ ಪ್ರಮಾಣವೂ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಈ ನಿರ್ಬಂಧವನ್ನು ಸಡಿಲಿಕೆ ಮಾಡಿದೆ.

ಇದೀಗ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಎಲ್ಲಾ ಗೃಹಬಳಕೆ ಎಲ್‌ಪಿಜಿ ಗ್ರಾಹಕರು 25 ದಿನಗಳ ಅಂತರದಲ್ಲಿ ರಿಫಿಲ್ ಬುಕ್ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಬದಲಾವಣೆಯನ್ನು ತಕ್ಷಣದಿಂದಲೇ ಜಾರಿಗೆ ತರಲು ಪೆಟ್ರೋಲಿಯಂ ಸಚಿವಾಲಯವು OMCಗಳಿಗೆ ಕಳುಹಿಸಿರುವ ಪತ್ರದ ಪ್ರತಿಯನ್ನೂ ಸಚಿವರು ಹಂಚಿಕೊಂಡಿದ್ದಾರೆ.

Vishwa News 24

Recent Posts

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ…

13 minutes ago

ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಘಾತ ; ವ್ಯಕ್ತಿ ಸಾವು – vishwanews24

ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಘಾತ ; ವ್ಯಕ್ತಿ ಸಾವು ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ…

29 minutes ago

ಸೆ.20ರಿಂದ 108 ಅಂಬುಲೆನ್ಸ್‌ ಸೇವೆ ಬಂದ್‌ : ನೌಕರರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ – vishwanews24

ಸೆ.20 ರಿಂದ 108 ಸೇವೆ ಬಂದ್ ;  ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್.. 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ಬೆಂಗಳೂರು:…

1 hour ago

ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ – vishwanews24

ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ ಭಾರತೀಯ ಜನತಾ ಪಾರ್ಟಿ…

2 hours ago

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ – VISHWANEWS24

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…

17 hours ago

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ – vishwanews24

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ   ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…

17 hours ago