Featured

ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ – vishwanews24

ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್

ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ. ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಾ.ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸಕ್ಸಸ್ ಬಗ್ಗೆ ಗೊತ್ತಾಗುತ್ತೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ಕೊಟ್ಟಿದ್ದೇವೆ.

ಕಾನ್ಸ್‌ಟೇಬಲ್​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago