Featured

ಇನ್ಮುಂದೆ ರೈಲಿನಲ್ಲಿ ಮೊಬೈಲ್‌‌‌‌‌‌‌‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್‌‌ ನಿರ್ಬಂಧ : ಭಾರತೀಯ ರೈಲ್ವೆ -Vishwanews24

ಇನ್ಮುಂದೆ ರೈಲಿನಲ್ಲಿ ಮೊಬೈಲ್‌‌‌‌‌‌‌‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್‌‌ ನಿರ್ಬಂಧ : ಭಾರತೀಯ ರೈಲ್ವೆ -Vishwanews24

ನವದೆಹಲಿ: “ಬೆಂಕಿ ಅವಘಡದಂತಹ ಪ್ರಕರಣಗಳು ಮರುಕಳಿಸಬಾರದು ಎನ್ನುವ ಉದ್ದೇಶದಿಂದ ರಾತ್ರಿ 11ರಿಂದ ಮುಂಜಾನೆ 5ರವರೆಗೆ ರೈಲಿನಲ್ಲಿ ಮೊಬೈಲ್‌‌‌‌‌‌ ಚಾರ್ಜಿಂಗ್‌‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್‌‌ ಅನ್ನು ನಿರ್ಬಂಧಿಸಲಾಗಿದೆ” ಎಂದು ಭಾರತೀಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಇದು ಮಾತ್ರವಲ್ಲದೇ, ರೈಲಿನಲ್ಲಿ ಧೂಮಪಾನಕ್ಕೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ. ಈ ರೀತಿಯಾದ ಅಪರಾಧ ಎಸಗುವವರಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾತ್ರಿ ಹೊತ್ತಿನಲ್ಲಿ ರೈಲು ಪ್ರಯಾಣದ ಸಂದರ್ಭ ಎಲೆಕ್ಟ್ರಾನಿಕ್‌ ಉಪಕರಣಗಳ ಚಾರ್ಜಿಂಗ್‌ ಜಾಸ್ತಿಯಾದ ಪರಿಣಾಮ ಡಿವೈಸ್‌‌‌ ಬಿಸಿಯಾಗಿ ಸಣ್ಣ ಪ್ರಮಾಣದಲ್ಲಿ ಅಗ್ನಿ ಅವಘಡವಾಗಿರುವ ಹಿನ್ನೆಲೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ : ಮಂಗಳೂರು:ಕೋವಿಡ್ ನಿಯಮ ಪಾಲನೆಯೊಂದಿಗೆ ಈಗಾಗಲೇ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮ ನಡೆಸಬಹುದು : ಸಚಿವ ಕೋಟ ಸ್ಪಷ್ಟನೆ -Vishwanews24

“ಮಾರ್ಚ್ 16ರಿಂದಲೇ ಪಶ್ಚಿಮ ರೈಲ್ವೆ ವಿಭಾಗವು ಇದನ್ನು ಕಾರ್ಯರೂಪಕ್ಕೆ ತಂದಿದ್ದು, ರಾತ್ರಿ ವೇಳೆ ಚಾರ್ಜಿಂಗ್‌‌ ಅನ್ನು ನಿಷೇಧಿಸಲಾಗಿದೆ. ಈ ಬಗ್ಗೆ ರೈಲ್ವೆ ಮಂಡಳಿ ಎಲ್ಲಾ ರೈಲ್ವೆಗಳಿಗೆ ಸೂಚನೆ ರವಾನಿಸಿದ್ದು, ಅದರಂತೆ ಮಾರ್ಚ್ 16ರಂದು ಜಾರಿಗೊಳಿಸಿದ್ದೇವೆ” ಎಂದು ಪಶ್ಚಿಮ ರೈಲ್ವೆಯ ಸಿಆರ್‌ಪಿಒ ಸುಮಿತ್ ಠಾಕೂರ್ ಮಾಹಿತಿ ನೀಡಿದ್ದಾರೆ.

“ಇದು ಹೊಸ ಸೂಚನೆಗಳೇನಲ್ಲ. ರೈಲ್ವೆ ಮಂಡಳಿಯ ಹಿಂದಿನ ಆದೇಶಗಳನ್ನು ಪುನರ್‌ ಉಲ್ಲೇಖಿಸಲಾಗಿದೆ. ಇತ್ತೀಚೆಗೆ ರೈಲಿನಲ್ಲಿ ಬೆಂಕಿ ಅವಘಡಗಳು ನಡೆಯುತ್ತಿರುವ ಹಿನ್ನೆಲೆ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ರಾತ್ರಿ 11ರಿಂದ ಬೆಳಗ್ಗೆ 5ರ ತನಕ ರೈಲಿನ ಮೈನ್‌ ಸ್ವಿಚ್‌ ಬೋರ್ಡ್‌ನಿಂದ ಪವರ್‌ ಆಫ್‌ ಮಾಡಿಡಲಾಗುತ್ತದೆ” ಎಂದು ದಕ್ಷಿಣ ರೈಲ್ವೆ ಸಿಪಿಆರ್‌ಒ ಬಿ ಗುಣನೇಸನ್ ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

18 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago