ನವದೆಹಲಿ: “ಬೆಂಕಿ ಅವಘಡದಂತಹ ಪ್ರಕರಣಗಳು ಮರುಕಳಿಸಬಾರದು ಎನ್ನುವ ಉದ್ದೇಶದಿಂದ ರಾತ್ರಿ 11ರಿಂದ ಮುಂಜಾನೆ 5ರವರೆಗೆ ರೈಲಿನಲ್ಲಿ ಮೊಬೈಲ್ ಚಾರ್ಜಿಂಗ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಚಾರ್ಜಿಂಗ್ ಅನ್ನು ನಿರ್ಬಂಧಿಸಲಾಗಿದೆ” ಎಂದು ಭಾರತೀಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಇದು ಮಾತ್ರವಲ್ಲದೇ, ರೈಲಿನಲ್ಲಿ ಧೂಮಪಾನಕ್ಕೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ. ಈ ರೀತಿಯಾದ ಅಪರಾಧ ಎಸಗುವವರಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ರಾತ್ರಿ ಹೊತ್ತಿನಲ್ಲಿ ರೈಲು ಪ್ರಯಾಣದ ಸಂದರ್ಭ ಎಲೆಕ್ಟ್ರಾನಿಕ್ ಉಪಕರಣಗಳ ಚಾರ್ಜಿಂಗ್ ಜಾಸ್ತಿಯಾದ ಪರಿಣಾಮ ಡಿವೈಸ್ ಬಿಸಿಯಾಗಿ ಸಣ್ಣ ಪ್ರಮಾಣದಲ್ಲಿ ಅಗ್ನಿ ಅವಘಡವಾಗಿರುವ ಹಿನ್ನೆಲೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ : ಮಂಗಳೂರು:ಕೋವಿಡ್ ನಿಯಮ ಪಾಲನೆಯೊಂದಿಗೆ ಈಗಾಗಲೇ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮ ನಡೆಸಬಹುದು : ಸಚಿವ ಕೋಟ ಸ್ಪಷ್ಟನೆ -Vishwanews24
“ಮಾರ್ಚ್ 16ರಿಂದಲೇ ಪಶ್ಚಿಮ ರೈಲ್ವೆ ವಿಭಾಗವು ಇದನ್ನು ಕಾರ್ಯರೂಪಕ್ಕೆ ತಂದಿದ್ದು, ರಾತ್ರಿ ವೇಳೆ ಚಾರ್ಜಿಂಗ್ ಅನ್ನು ನಿಷೇಧಿಸಲಾಗಿದೆ. ಈ ಬಗ್ಗೆ ರೈಲ್ವೆ ಮಂಡಳಿ ಎಲ್ಲಾ ರೈಲ್ವೆಗಳಿಗೆ ಸೂಚನೆ ರವಾನಿಸಿದ್ದು, ಅದರಂತೆ ಮಾರ್ಚ್ 16ರಂದು ಜಾರಿಗೊಳಿಸಿದ್ದೇವೆ” ಎಂದು ಪಶ್ಚಿಮ ರೈಲ್ವೆಯ ಸಿಆರ್‌ಪಿಒ ಸುಮಿತ್ ಠಾಕೂರ್ ಮಾಹಿತಿ ನೀಡಿದ್ದಾರೆ.
“ಇದು ಹೊಸ ಸೂಚನೆಗಳೇನಲ್ಲ. ರೈಲ್ವೆ ಮಂಡಳಿಯ ಹಿಂದಿನ ಆದೇಶಗಳನ್ನು ಪುನರ್ ಉಲ್ಲೇಖಿಸಲಾಗಿದೆ. ಇತ್ತೀಚೆಗೆ ರೈಲಿನಲ್ಲಿ ಬೆಂಕಿ ಅವಘಡಗಳು ನಡೆಯುತ್ತಿರುವ ಹಿನ್ನೆಲೆ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ರಾತ್ರಿ 11ರಿಂದ ಬೆಳಗ್ಗೆ 5ರ ತನಕ ರೈಲಿನ ಮೈನ್ ಸ್ವಿಚ್ ಬೋರ್ಡ್‌ನಿಂದ ಪವರ್ ಆಫ್ ಮಾಡಿಡಲಾಗುತ್ತದೆ” ಎಂದು ದಕ್ಷಿಣ ರೈಲ್ವೆ ಸಿಪಿಆರ್‌ಒ ಬಿ ಗುಣನೇಸನ್ ಹೇಳಿದ್ದಾರೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…