ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್ ; ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24

ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್

ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24

ಉಡುಪಿ: ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕರೊನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್‌ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಸಂಪೂರ್ಣ ಪ್ರದೇಶವನ್ನು ಲಾಕ್‌ಡೌನ್ ಅಥವಾ ಸೀಲ್‌ಡೌನ್ ಮಾಡುವ ಬದಲಿಗೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆಗಳನ್ನು ಸೀಲ್‌ಡೌನ್ ಮಾಡುವುದರಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದಲ್ಲದೆ ಇತರ ಚಟುವಟಿಕೆಗಳಿಗೂ ಅವಕಾಶವಾಗುತ್ತದೆ ಎಂದು ತಿಳಿಸಿದರು.

ಮುಂಬಯಿಯಿಂದ ವಲಸೆ ಬಂದಿರುವವರ ಕಾರಣದಿಂದಾಗಿ ಉಡುಪಿಯಲ್ಲಿ ಸೋಂಕು ಹೆಚ್ಚಾಗಿದ್ದು ಮಂಗಳವಾರ ಒಂದೇ ದಿನ 150 ಪ್ರಕರಣಗಳು ದಾಖಲಾಗಿವೆ. ನಾಗರಿಕರು ಆತಂಕಪಡುವುದು ಬೇಡ. ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ವಲಸೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಉಡುಪಿಯಲ್ಲಿ ಈಗಾಗಲೇ ಒಂದು ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಪ್ರಯೋಗಾಲಯ ಸ್ಥಾಪಿಸುವುದಾಗಿ ಸಚಿವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಹಸಿರುವಲಯದಲ್ಲಿದ್ದ ಉಡುಪಿ ಜಿಲ್ಲೆ ಇಂದು ಬೆಂಗಳೂರನ್ನು ಹಿಂದಿಕ್ಕಿ ಮೊದಲನೇ ಸ್ಥಾನದಲ್ಲಿದೆ. ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಸಾರ್ವಜನಿಕರು ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಹೇಳಿದರು.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅನ್ವಯವಾಗುವ ನಿಯಮಗಳು ಮಂಗಳೂರು ವಿಮಾನ ನಿಲ್ದಾಣಕ್ಕೂ ಅನ್ವಯವಾಗಲಿವೆ. ಈ ಕುರಿತಂತೆ ಶೀಘ್ರದಲ್ಲೇ ಆದೇಶವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು. ಐಸಿಎಂಆರ್ ಮಾರ್ಗಸೂಚಿಗಳನ್ನು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಲಾಗುವುದು. ಇದರ ಅನ್ವಯ ಪ್ರಯಾಣಿಕರು ಎರಡು ದಿನಗಳಷ್ಟೇ ಹಳೆಯದಾದ ಕೋವಿಡ್ ನೆಗೆಟೀವ್ ವರದಿಯನ್ನು ಏರ್‌ಪೋರ್ಟಿನಲ್ಲಿ ತೋರಿಸಬೇಕಾಗುವುದು. ನೆಗೆಟೀವ್ ಎಂದು ಖಚಿತವಾದರಷ್ಟೇ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago