ಮುಂದಿನ ದಿನಗಳಲ್ಲಿ ಸೆಲೂನುಗಳು ಮಂಗಳವಾರ ಓಪನ್ ಇರುತ್ತೆ ಆದರೆ ಆದಿತ್ಯವಾರ ವಾರದ ರಜೆ: vishwanews24

ಉಡುಪಿ: ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ರವಿವಾರ ಸೆಲೂನು ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇರುವುದರಿಂದ ಮುಂದಿನ ದಿನಗಳಲ್ಲಿ ಮಂಗಳವಾರ ಬದಲು ರವಿವಾರ ಸಲೂನ್ ಗಳನ್ನು ಬಂದ್ ಮಾಡಲು ಉಡುಪಿ ಜಿಲ್ಲಾ ಸವಿತಾ ಸಮಾಜ ನಿರ್ಧರಿಸಿದೆ.

ಮಂಗಳವಾರ ಜಿಲ್ಲಾ ಪದಾಧಿಕಾರಿಗಳು ಮತ್ತು ಏಳು ತಾಲ್ಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರವಿವಾರ ಗ್ರಾಹಕರ ಸಂಖ್ಯೆ ಹೆಚ್ಚು ಇರುವುದರಿಂದ ಸುರಕ್ಷಿತ ಅಂತರ ಕಾಪಾಡಿ ಕೊಳ್ಳಲು ಮತ್ತು ವೃತ್ತಿ ನಿರತರಿಗೆ ನಿಯಮಾವಳಿಗಳನ್ನು ಪಾಲಿಸಲು ಕಷ್ಟ ಸಾಧ್ಯವಾಗುತ್ತದೆ ಎಂದು ಸವಿತಾ ಸಮಾಜ ತಿಳಿಸಿದೆ.

ಈ ಎಲ್ಲ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಈಗ ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿಯೂ ಕೂಡ ಕಡ್ಡಾಯವಾಗಿ ಸೆಲೂನುಗಳನ್ನು ರವಿವಾರ ಬಂದ್ ಮಾಡಿ, ಮಂಗಳವಾರ ತೆರೆಯಲು ತೀರ್ಮಾನಿಸಲಾಗಿದೆ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಭಾಸ್ಕರ್ ಭಂಡಾರಿ ಗುಡ್ಡೆಯಂಗಡಿ, ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ್ ಸಾಲಿಯಾನ್, ರಾಜ್ಯ ಪ್ರತಿನಿಧಿ ವಿಶ್ವನಾಥ್ ಭಂಡಾರಿ ನಿಂಜೂರು, ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಸವಿತಾ ಸಹಕಾರಿಯ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago