Featured

ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಪ್ರಕರಣ : ಯುವತಿ ಹಾಗೂ ಆಕೆಯ ನಿಶ್ಚಿತ ವರ ಬಂಧನ – vishwanews24

ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಪ್ರಕರಣ : ಯುವತಿ ಹಾಗೂ ಆಕೆಯ ನಿಶ್ಚಿತ ವರ ಬಂಧನ

ನವದೆಹಲಿ : ಇನ್ಶೂರೆನ್ಸ್​ ಏಜೆಂಟ್​ನ ಶವ ಚರಂಡಿಯಲ್ಲಿ ಪತ್ತೆಯಾಗಿರುವ ಘಟನೆ ಫರೀದಾಬಾದ್​​ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ಆಕೆಯ ಫಿಯಾನ್ಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಚಂದರ್ ತನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾರಣ ಆತನನ್ನು ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಶವ ಪತ್ತೆಯಾಗಿತ್ತು. ಸಮೀಪದಲ್ಲಿ ನಿಲ್ಲಿಸಿದ್ದ ಬೈಕ್‌ನ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಶವವನ್ನು ಗುರುತಿಸಲಾಯಿತು. ಫರಿದಾಬಾದ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಅವರ ಕುಟುಂಬವನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಮೃತದೇಹದ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದವು. ಚಂದರ್ ಅವರ ಸಹೋದರ ಮದನ್ ಗೋಪಾಲ್ ನೀಡಿದ ದೂರಿನ ನಂತರ, ಕೊಲೆ ಪ್ರಕರಣ ದಾಖಲಿಸಲಾಯಿತು.

ತನಿಖೆಯ ಸಮಯದಲ್ಲಿ, ಪೊಲೀಸರು ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿಸಿದ್ದಾರೆ. ಲಕ್ಷ್ಮಿ ಪೊಲೀಸರಿಗೆ ಚಂದರ್ ತನಗೆ ಐದು ವರ್ಷಗಳಿಂದ ಪರಿಚಯವಿರುವುದಾಗಿ ಹೇಳಿದ್ದಾಳೆ. ಇತ್ತೀಚೆಗೆ ಕೇಶವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ಚಂದರ್ ಬೇಸರಗೊಂಡಿದ್ದ, ಅವನು ಲಕ್ಷ್ಮಿಯನ್ನು ಬ್ಲಾಕ್ ಮೇಲ್ ಮಾಡಿ ಕೇಶವ್ ಅವರನ್ನು ಮದುವೆಯಾಗಬೇಡ ಎಂದು ಹೇಳಿದ್ದ.

ಈ ಬ್ಲ್ಯಾಕ್ ಮೇಲ್​​ನಿಂದ ಬೇಸತ್ತ ಆಕೆ ಮತ್ತು ಕೇಶವ್ ಜತೆ ಸೇರಿ ಚಂದರ್ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದಳು ಎಂದು ಪೊಲೀಸ್ ವಕ್ತಾರ ಯಶ್ಪಾಲ್ ಸಿಂಗ್ ತಿಳಿಸಿದ್ದಾರೆ. ಅಕ್ಟೋಬರ್ 25 ರಂದು, ಲಕ್ಷ್ಮಿ ಚಂದರ್ ಅವರನ್ನು ದೆಹಲಿಯ ಮಿಥಾಪುರಕ್ಕೆ ಕರೆಸಿಕೊಂಡಿದ್ದಳು. ಬೈಕ್​ನಲ್ಲಿ ಫರಿದಾಬಾದ್‌ನ ಆತ್ಮದ್‌ಪುರದಲ್ಲಿರುವ ನಿರ್ಜನ ಪ್ರದೇಶಕ್ಕೆ ಹೋಗಲು ಕೇಳಿಕೊಂಡರು. ಅಲ್ಲಿ, ಕೇಶವ್ ಮತ್ತು ಅವನ ಇಬ್ಬರು ಸ್ನೇಹಿತರು ಚಂದರ್ ಮೇಲೆ ಹಲ್ಲೆ ನಡೆಸಿದರು.

ಉಸಿರುಗಟ್ಟಸಿ ಕೊಂದು, ಆರೋಪಿಗಳು ಶವವನ್ನು ಚರಂಡಿಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದರು. ಆರೋಪಿಗಳು ಚಂದರ್ ಅವರ ಜೇಬಿನಿಂದ ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಆದರೆ ಬೈಕ್‌ನ ಸಂಖ್ಯೆ ಪೊಲೀಸರಿಗೆ ಯಾರೆಂದು ಪತ್ತೆ ಹಚ್ಚಲು ಸಹಾಯ ಮಾಡಿತ್ತು. ಅಪರಾಧದಲ್ಲಿ ಭಾಗಿಯಾಗಿರುವ ಕೇಶವ್ ಅವರ ಇಬ್ಬರು ಸಹಚರರನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago