Featured

ಇನ್ ಸ್ಟಾಗ್ರಾಂ ರೀಲ್ಸ್ ನಲ್ಲಿ ಶುರುವಾದ ಪ್ರೀತಿ – ಮದುವೆಯಾಗಿದ್ದ ಗರ್ಭಿಣಿ ಮಹಿಳೆ ಅನುಮಾನಾಸ್ಪದ ಸಾವು – vishwanews24

ಇನ್ ಸ್ಟಾಗ್ರಾಂ ರೀಲ್ಸ್ ನಲ್ಲಿ ಶುರುವಾದ ಪ್ರೀತಿ – ಮದುವೆಯಾಗಿದ್ದ ಗರ್ಭಿಣಿ ಮಹಿಳೆ ಅನುಮಾನಾಸ್ಪದ ಸಾವು – ಆರೋಪಿಗಳಿಗಾಗಿ ಹುಟುಕಾಟ

ಬೆಳಗಾವಿ, : ಇನ್ಸ್ಟಾಗ್ರಾಂನಲ್ಲಿ ರೀಲ್ಸ್  ಮಾಡುತ್ತ ಹುಟ್ಟಿದ ಪ್ರೀತಿಗೆ ಸ್ವತಃ ಊರನ್ನು, ಅಪ್ಪ-ಅಮ್ಮನನ್ನು ಬಿಟ್ಟು ಮೈಸೂರಿನಿಂದ ಬೆಳಗಾವಿಗೆ ಬಂದು ಮದುವೆಯಾಗಿ ಗರ್ಭಿಣಿಯೂ ಆಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ  ಘಟನೆ ನಡೆದಿದೆ. ಸದ್ಯ ನೇಣು ಬಿಗಿದ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿರುವಂತೆ ಮಹಿಳೆ ಶವ ಪತ್ತೆಯಾಗಿದ್ದು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಮತ್ತೊಂದೆಡೆ ಮಹಿಳೆ ಕುಟುಂಬಸ್ಥರು ಗಂಡ ಹಾಗೂ ಆತನ ಕುಟುಂಬಸ್ಥರ ಮೇಲೆ ಕೊಲೆ ಆರೋಪ ಮಾಡಿದ್ದು ಹುಡುಕಾಟ ನಡೆಯುತ್ತಿದೆ.

ಮೈಸೂರಿನ ಕುಂಬಾರಕೊಪ್ಪಲಿನ ಮಂಜುಳಾ ಅಲಿಯಾಸ್ ನಯನಾ(23) ಎಂಬ ಯುವತಿಗೂ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ನಿವಾಸಿಯಾಗಿರುವ ಬೋರೇಶ್ ಎಂಬ ಯುವಕನಿಗೂ ಇನ್ಸ್ಟಾಗ್ರಾಂನಲ್ಲಿ ರೀಲ್ಸ್​ ಮಾಡುವ ಮೂಲಕ ಪರಿಚಯವಾಗಿತ್ತು. ಈ ಪರಿಚಯ ಸ್ನೇಹವಾಗಿ ಇಬ್ಬರಲ್ಲೂ ಪ್ರೀತಿ ಹುಟ್ಟಿತ್ತು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ರು. ಹೀಗಾಗಿ ಮಂಜುಳಾ ತನ್ನ ಊರು, ಮನೆ ಎಲ್ಲವನ್ನೂ ಬಿಟ್ಟು ಬೆಳಗಾವಿಗೆ ಬಂದು ಬೋರೇಶ್ ಜೊತೆ ಮದುವೆಯಾಗುತ್ತಾಳೆ. ಈ ವಿಚಾರ ತಿಳಿಯುತ್ತಿದ್ದಂತೆ ಯುವತಿ ಕುಟುಂಬಸ್ಥರು ಬೆಳಗಾವಿಗೆ ಧಾವಿಸಿ ಮಗಳನ್ನು ಮತ್ತೆ ಮೈಸೂರಿಗೆ ಕರೆದುಕೊಂಡು ಹೋಗುತ್ತಾರೆ.

ಆದರೆ ಮತ್ತೆ ಮಂಜುಳಾ ಮನೆ ಬಿಟ್ಟು ಓಡಿ ಬಂದು ಗಂಡನ ಜೊತೆ ಜೀವನ ಮಾಡುತ್ತಾಳೆ. ಇದರಿಂದ ನೊಂದ ಯುವತಿ ಕುಟುಂಬ ಮದುವೆಯಾಗಿದೆ ಸಂಸಾರ ಮಾಡಿಕೊಂಡು ಖುಷಿಯಾಗಿ ಇರಲಿ ಎಂದು ಮಗಳನ್ನು ಬಿಟ್ಟುಬಿಡುತ್ತಾರೆ. ಒಂದು ವರ್ಷ ಸುಖವಾಗಿದ್ದ ಈ ಸಂಸಾರದಲ್ಲಿ ಇತ್ತೀಚೆಗೆ ಬಿರುಕು ಬಿಟ್ಟಿದೆ. 1 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಮಂಜುಳಾ 3 ತಿಂಗಳ ಗರ್ಭಿಣಿಯಾಗಿದ್ದು ಇದು ಗಂಡನಿಗೆ ಇಷ್ಟವಿರಲಿಲ್ಲ. ಮಂಜುಳಾಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಗಂಡ ಹಾಗೂ ಆತನ ಕುಟುಂಬಸ್ಥರು ಒತ್ತಡ ಹೇರಿದ್ದರು. ಈ ಬಗ್ಗೆ ಮಂಜುಳಾ ತನ್ನ ಚಿಕ್ಕಮ್ಮನ ಬಳಿ ಅಳಲು ತೋಡಿಕೊಂಡಿದ್ದಳು. ಆದರೆ ಈಗ ಮಂಜುಳಾ ಶವವಾಗಿ ಪತ್ತೆಯಾಗಿದ್ದಾಳೆ.

ಬೆಳಗಾವಿ ಹೊರವಲಯದ ಮಚ್ಚೆ ಗ್ರಾಮದಲ್ಲಿ ಪತಿ ಬೋರೇಶ್ & ಕುಟುಂಬದವರು ಉಸಿರುಗಟ್ಟಿಸಿ ನಮ್ಮ ಮಗಳನ್ನು ಕೊಂದು ಪರಾರಿಯಾಗಿದ್ದಾರೆ ಎಂದು ಮಂಜುಳಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಗರ್ಭಪಾತ ಮಾಡಿಸಿಕೊಳ್ಳಲು ವಿರೋಧ ಮಾಡಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಘಟನೆ ಸಂಬಂಧ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಮಾತನಾಡಿದ್ದು, ಮಂಜುಳಾ ಅನ್ನೋ ಹುಡುಗಿ ಮದುವೆಯಾಗಿ ಒಂದು ವರ್ಷ ಆಗಿದ್ದು 3 ತಿಂಗಳ ಗರ್ಭಿಣಿಯಾಗಿದ್ದಳು. ಮಹಿಳೆ ನೇಣು ಹಾಕಿಕೊಂಡಿದ್ದಾರೆ ಅನ್ನೋ ಮಾಹಿತಿ ಸಿಕ್ಕ ನಂತರ ಮನೆಗೆ ದೌಡಾಯಿಸಿ ಚೆಕ್ ಮಾಡಿ ಕುಟುಂಬಸ್ಥರಿಗೆ ಮಾಹಿತಿ ನೀಡಿದೆವು. ಮದುವೆಯಾದ ಬಳಿಕ ಹುಡುಗನ ಮನೆಯವರಿಂದ ತೊಂದರೆ ಆಗ್ತಿತ್ತು. ಮಾನಸಿಕ, ದೈಹಿಕ ದೌರ್ಜನ್ಯ ಮಾಡಿದ್ದಾರೆ. ಕಾನೂನು ರೀತಿಯಲ್ಲಿ ಅಪಾಧಿತರಿಗೆ ಶಿಕ್ಷೆ ಮಾಡುತ್ತೇವೆ. ಎರಡು ತಂಡಗಳನ್ನ ರಚನೆ ಮಾಡಿ ಮೃತಳ ಗಂಡ ಹಾಗೂ ಅಪರಾಧಿತರನ್ನ ಬಂಧಿಸಲಾಗುತ್ತೆ ಎಂದು ತಿಳಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago