ಬೆಂಗಳೂರು : ನಟ ಯಶ್ ಈಗ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದಿದ್ದಾರೆ. ಒಂದು ಮಿಲಿಯನ್ ಗಡಿ ದಾಟುವ ಮೂಲಕ ಇನ್ಸ್ಟಾಗ್ರಾಮ್ ನಲ್ಲಿಯೂ ದಾಖಲೆ ಮಾಡಿದ್ದಾರೆ. ‘ಕೆಜಿಎಫ್’ ಸಿನಿಮಾದ ಸಮಯದಲ್ಲಿ ಇನ್ಸ್ಟಾಗ್ರಾಮ್ ಗೆ ಬಂದಿದ್ದ ಯಶ್ ಈಗ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕನ್ನಡದ ನಟ ಆಗಿದ್ದಾರೆ.
ಸ್ಟಾರ್ ಪವರ್ ಅನ್ನು ಈಗ ಸಿನಿಮಾದ ಯಶಸ್ಸು, ಅಭಿಮಾನಿ ಬಳಗದ ಜೊತೆಗೆ ಸೋಷಿಯಲ್ ಮೀಡಿಯಾದ ಹಿಂಬಾಲಕ ಮೂಲಕವೂ ಅಳೆಯಲಾಗುತ್ತದೆ. ಈಗ ರಾಕಿಂಗ್ ಸ್ಟಾರ್ ಯಶ್ ಇನ್ಸ್ಟಾಗ್ರಾಮ್ ನಲ್ಲಿ ಕನ್ನಡದ ಇತರ ನಟರಾದ ದರ್ಶನ್, ಸುದೀಪ್, ಪುನೀತ್ ರನ್ನು ಹಿಂದೆ ಹಾಕಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ಯಶ್ ನಂತರ ಸ್ಥಾನದಲ್ಲಿ ನಟ ದರ್ಶನ್ 261K, ಸುದೀಪ್ 447K ಹಾಗೂ ಪುನೀತ್ ರಾಜ್ ಕುಮಾರ್ 717K ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
ಫೇಸ್ ಬುಕ್ ಹಾಗೂ ಟ್ವಿಟ್ಟರ್ ಗಿಂತ ಯಶ್ ಇನ್ಸ್ಟಾಗ್ರಾಮ್ ನಲ್ಲಿ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ‘ಕೆಜಿಎಫ್’ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಆದ ಯಶ್ ಗೆ ಅದೇ ಹವಾದಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಾರೆ. ‘ಕೆಜಿಎಫ್ 2’ ಸಿನಿಮಾ ಬಂದ ಮೇಲೆ ಫಾಲೋವರ್ಸ್ ಸಂಖ್ಯೆ ಡಬಲ್ ಆದರೂ ಅಚ್ಚರಿ ಪಡಬೇಕಿಲ್ಲ.
ಯಶ್ ಇನ್ಸ್ಟಾಗ್ರಾಮ್ ನಲ್ಲಿ ಸದಾ ಸಕ್ರಿಯವಾಗಿರುತ್ತಾರೆ. ತಮ್ಮ ಸಿನಿಮಾಗಳ ಸುದ್ದಿ, ಮಗಳ ಫೋಟೋಗಳು, ಕುಟುಂಬದ ಕಾರ್ಯಕ್ರಮಗಳ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…