ಉಡುಪಿ

ಇಫ್ತಾರ್ ಕೂಟದ ಬದಲಾಗಿ ಸ್ನೇಹ ಕೂಟ – ಪೇಜಾವರ ಶ್ರೀ

ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.

ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ ಶುಭಾಶಯವನ್ನು ಸಲ್ಲಿಸಿ ಫಲ, ಖರ್ಜೂರವನ್ನು ನೀಡಿದರು.

ಈ ವೇಳೇ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟವೇ ಆಗಬೇಕಿಲ್ಲ, ಸ್ನೇಹ ಕೂಟ ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ ಅವಕಾಶ ಸಿಕ್ಕಿಲ್ಲ. ಬೇರೆ ಕಾರ್ಯಕ್ರಮಗಳೆಲ್ಲಾ ಫಿಕ್ಸ್ ಆಗಿತ್ತು, ಹೀಗಾಗಿ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸ್ನೇಹ ಕೂಟ ಮಾಡುತ್ತೇವೆ. ಕ್ರೈಸ್ತರು, ಮುಸಲ್ಮಾನರನ್ನು ಈ ಸ್ನೇಹ ಕೂಟಕ್ಕೆ ಕರೆಯುತ್ತೇವೆ. ಯೋಗ್ಯ ಸಂದರ್ಭ ನೋಡಿ ಸ್ನೇಹ ಕೂಟ ಮಾಡುತ್ತೇವೆ ಎಂದು ತಿಳಿಸಿದರು.

ದೇ ವೇಳೆ ಈ ಬಾರಿಯ ಸ್ನೇಹ ಕೂಟಕ್ಕೆ ಯಾರ ವಿರೋಧವು ಇರಲಿಲ್ಲ. ಸಂಘದ ಪ್ರಮುಖರೇ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದರು. ಆದರೆ ಕಳೆದ ಬಾರಿ ಹಿಂದೂಗಳಲ್ಲೇ ಕೆಲವರು ನೀವು ಮಾಡಿದ್ದು ತಪ್ಪು ಎಂದು ಹೇಳಿದ್ದರು. ಆ ವೇಳೆ ನಮ್ಮ ಪರಮಗುರುಗಳು ಪರ್ಯಾಯ ಪೂರ್ವದಲ್ಲಿ ಹಾಜೀ ಅಬ್ದುಲ್ಲಾ ಅವರಿಂದ ಪಾದ ಪೂಜೆ ಸ್ವೀಕಾರ ಮಾಡಿದ್ದಾರೆ. ನಾವು ಅವರನ್ನು ಕರೆಸಿ ಊಟ ಹಾಕಿದರೆ ಏನು ತಪ್ಪಾಗುತ್ತದೆ ಎಂದು ಹೇಳಿದ್ದೆ ಎಂದು ತಿಳಿಸಿದರು.

ಹಿಂದೂಗಳು ಕೆಲ ಬೇಡಿಕೆ ನಡೆಸಬೇಕು, ಮುಸಲ್ಮಾನರು ನಮ್ಮ ಕೆಲ ಬೇಡಿಕೆ ನಡೆಸಬೇಕು ಹೀಗಾಗಿ ಸ್ನೇಹಕೂಟ, ಮಾತುಕತೆ ನಡೆಯುತ್ತಿದ್ದರೆ ಮತ್ತಷ್ಟು ಸಮನ್ವಯ ಬೆಳೆಯಲು ಅನುಕೂಲ, ನಮ್ಮಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ರಾಜಕಾರಣಿಗಳು ಮಾಡುವುದೆಲ್ಲಾ ಮುಸ್ಲಿಂ ತುಷ್ಟೀಕರಣಕ್ಕೆ, ಓಟಿಗಾಗಿ ಆದರೆ ನಮ್ಮದು ಹಾಗೆ ಅಲ್ಲ ಬರೀ ತುಷ್ಟೀಕರಣ ಅಲ್ಲ. ಎಲ್ಲರ ಜೊತೆ ಸೌಹಾರ್ದ ಇರಬೇಕು ಎಂದು ಹೇಳಿದರು. ಇದೇ ಸಂದರ್ಭ ಮಾತನಾಡಿದ ಮುಸ್ಲಿಂ ಮುಖಂಡ ಅನ್ಸಾರ್ ಅಹಮ್ಮದ್ ಪ್ರತಿವರ್ಷದಂತೆ ಈ ಬಾರಿಯು ರಂಜಾನ್ ದಿನದಂದು ಸ್ವಾಮೀಜಿಗೆ ಫಲ ಸಲ್ಲಿಸಿ ಆಶೀರ್ವಾದ ಪಡೆದಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

9 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

9 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

10 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

10 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago