Featured

ಇಬ್ಬರು ಆರೋಪ ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ : ರೋಹಿಣಿ – ರೂಪಗೆ ಸುಪ್ರೀಂಕೋರ್ಟ್‌ ಸಲಹೆ – Vishwanews24

ಇಬ್ಬರು ಆರೋಪ ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ : ರೋಹಿಣಿ – ರೂಪಗೆ ಸುಪ್ರೀಂಕೋರ್ಟ್‌ ಸಲಹೆ

ನವದೆಹಲಿ : ಕರ್ನಾಟಕದ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ಗಲಾಟೆ ಬಗ್ಗೆ ಸುಪ್ರೀಂಕೋರ್ಟ್ ಸಲಹೆಯನ್ನು ನೀಡಿದ್ದರೂ ಇಬ್ಬರು ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ ಎಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಮಂಗಳವಾರ ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.

ಐಪಿಎಸ್ ಅಧಿಕಾರಿ ರೂಪಾ ಅವರು ಮಾಡಿರುವ ಆರೋಪಿಗಳ ಮೇಲೆ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್‌ ಮತ್ತು ಪಂಕಜ್‌ ಮಿತ್ತಲ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಉಭಯ ಪಕ್ಷಕಾರರು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ಡಿಸೆಂಬರ್‌ 15ರಂದು ಪ್ರಕರಣಕ್ಕೆ ತಡೆ ನೀಡಿದ್ದ ಸರ್ವೋಚ್ಚ ನ್ಯಾಯಾಲಯವು ಮಾಧ್ಯಮಗಳಲ್ಲಿ ಮಾತನಾಡದಂತೆ ಉಭಯ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆ ಸಲಹೆ ನೀಡಿತ್ತು.

ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ಚರ್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago