ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ.
ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಲಕ್ಷ್ಮಿ ಮದುವೆಯಾಗಿ ಐದು ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪತಿ ರಮೇಶ್ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಸಾವಿನ ಬಗ್ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಲಕ್ಷ್ಮಿ ಆತ್ಮಹತ್ಯೆಗೆ ಪತಿಯೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ರಮೇಶ್ ಮತ್ತೊಂದು ಮದುವೆಯಾಗಿದ್ದು ಡಿವೋರ್ಸ್ ಕೊಡುವಂತೆ ಪತ್ನಿಗೆ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ಪದೇ ಪದೇ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು. ಈ ವಿಚಾರ ಕುಟುಂಬಸ್ಥರ ಬಳಿ ವಿಜಯಲಕ್ಷ್ಮಿ ಹೇಳಿದ್ದಳು. ಈತನ ಹಿಂಸೆಯಿಂದ ಬೇಸತ್ತು ವಿಜಯಲಕ್ಷ್ಮಿ ತನ್ನ ಮಕ್ಕಳನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…