ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಮಂದಿ ಬೆಚ್ಚಿಬಿದ್ದಿದ್ದಾರೆ.
ಗಂಗಾ ದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಹೊತ್ತಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ.
ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಫೋನ್ನಲ್ಲಿ ಹೇಳಿದ್ದಾರೆ. ಕೂಡಲೇ ಅಲರ್ಟ್ ಆಗಿರುವ ಕಂಟ್ರೋಲ್ ರೂಮ್, ಸ್ಥಳಕ್ಕೆ ಹೊಯ್ಸಳ ಟೀಂ ಕಳುಹಿಸಿದೆ. ಪರಿಶೀಲನೆ ಮಾಡಿ ಗಂಗಾದೇವಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್ನಲ್ಲಿ ಜೈಲು ಪಾಲಾಗಿದ್ದಾನೆ. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು ಎಂದು ತಿಳಿದುಬಂದಿದೆ. ಇನ್ನು, ಈ ಹಿಂದೆ ಗಂಗಾದೇವಿಯೇ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಮಕ್ಕಳ ಜೊತೆ ಅಸಭ್ಯವರ್ತನೆ ತೋರುತ್ತಾನೆಂದು ಜಾಲಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…