ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಅವರು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ತಮ್ಮ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು. ಗೊಂದಲ ಸೃಷ್ಟಿಯಾಗಿದೆ, ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿವೆ ಎಂದರು.
ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…