Featured

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ: ಸಿದ್ದರಾಮಯ್ಯ – vishwanews24

ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ..

2028 ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ತರಲು ಕಾರ್ಯತಂತ್ರ..

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಅವರು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಮ್ಮ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು. ಗೊಂದಲ ಸೃಷ್ಟಿಯಾಗಿದೆ, ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿವೆ ಎಂದರು.

ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

20 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

20 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

21 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

21 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

21 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

21 hours ago