Featured

ಇರಾಕ್‌ : ವಿವಾಹ ಸಮಾರಂಭದಲ್ಲಿ ಭೀಕರ ಅಗ್ನಿಅವಘಡ -114 ಮಂದಿ ಸಜೀವ ದಹನ, 150ಕ್ಕೂ ಹೆಚ್ಚು ಮಂದಿ ಗಂಭೀರ – vishwanews24

ಇರಾಕ್‌ :  ವಿವಾಹ ಸಮಾರಂಭದಲ್ಲಿ ಭೀಕರ ಅಗ್ನಿಅವಘಡ – 114 ಮಂದಿ ಸಜೀವ ದಹನ, 150ಕ್ಕೂ ಹೆಚ್ಚು ಮಂದಿ ಗಂಭೀರ

ಇರಾಕ್‌: ವಿವಾಹ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 114ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ.

ಇದು ಪ್ರಧಾನವಾಗಿ ಕ್ರಿಶ್ಚಿಯನ್ ಸಮುದಾಯವೇ ಹೆಚ್ಚಾಗಿ ನೆಲೆಸಿರುವ ಪ್ರದೇಶವಾಗಿದ್ದು, ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿನ ಪ್ರದೇಶವಾಗಿದೆ. ಮಂಗಳವಾರ ರಾತ್ರಿ ಸ್ಥಳೀಯ ಕಾಲಮಾನ ಸುಮಾರು 10:45ಕ್ಕೆ (19:45 GMT) ಈ ಅನಾಹುತ ಸಂಭವಿಸಿದೆ.

ಮದುವೆ ಸಮಾರಂಭ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಪರಿಣಾಮ ಬೆಂಕಿ ಹಾಲ್ ನಲ್ಲಿರುವ ಪರದೆಗಳಿಗೆ ಆವರಿಸಿಕೊಂಡು ಇಡೀ ಸಭಾಂಗಣವನ್ನು ಆವರಿಸಿಕೊಂಡು ಸಮಾರಂಭದಲ್ಲಿ ಭಾಗಿಯಾಗಿದ್ದವರು ಗಾಬರಿಯಿಂದ ಹೊರ ಓಡಿ ಬರುವಾಗ ನೂಕುನುಗ್ಗಲು ಸಂಭವಿಸಿ ಬೆಂಕಿಗೆ ಆಹುತಿಯಾಗಿದ್ದಾರೆ.

ಬೆಂಕಿ ಅವಘಡಕ್ಕೆ ಯಾವುದೇ ಅಧಿಕೃತ ಕಾರಣ ಪತ್ತೆಯಾಗದಿದ್ದರೂ, ಆಚರಣೆಯ ಸಂದರ್ಭದಲ್ಲಿ ಬಳಸಿದ ಪಟಾಕಿಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ ಎಂದು ಇರಾಕ್‌ನ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

ಘಟನೆ ಸಂಭವಿಸಿದ ಕೂಡಲೇ ಅಡುಗೆಗೆ ಬಳಸಿದ್ದ ಹೆಚ್ಚಿನ ಗ್ಯಾಸ್ ಸಿಲಿಂಡರ್ ಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದರ್ ಅವರು ಸರ್ಕಾರಿ ಇರಾಕಿ ನ್ಯೂಸ್ ಏಜೆನ್ಸಿ ಮೂಲಕ ಅಪಘಾತದ ಅಂಕಿಅಂಶವನ್ನು ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago