ಇರಾಕ್: ವಿವಾಹ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 114ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ.
ಇದು ಪ್ರಧಾನವಾಗಿ ಕ್ರಿಶ್ಚಿಯನ್ ಸಮುದಾಯವೇ ಹೆಚ್ಚಾಗಿ ನೆಲೆಸಿರುವ ಪ್ರದೇಶವಾಗಿದ್ದು, ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿನ ಪ್ರದೇಶವಾಗಿದೆ. ಮಂಗಳವಾರ ರಾತ್ರಿ ಸ್ಥಳೀಯ ಕಾಲಮಾನ ಸುಮಾರು 10:45ಕ್ಕೆ (19:45 GMT) ಈ ಅನಾಹುತ ಸಂಭವಿಸಿದೆ.
ಮದುವೆ ಸಮಾರಂಭ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಪರಿಣಾಮ ಬೆಂಕಿ ಹಾಲ್ ನಲ್ಲಿರುವ ಪರದೆಗಳಿಗೆ ಆವರಿಸಿಕೊಂಡು ಇಡೀ ಸಭಾಂಗಣವನ್ನು ಆವರಿಸಿಕೊಂಡು ಸಮಾರಂಭದಲ್ಲಿ ಭಾಗಿಯಾಗಿದ್ದವರು ಗಾಬರಿಯಿಂದ ಹೊರ ಓಡಿ ಬರುವಾಗ ನೂಕುನುಗ್ಗಲು ಸಂಭವಿಸಿ ಬೆಂಕಿಗೆ ಆಹುತಿಯಾಗಿದ್ದಾರೆ.
ಬೆಂಕಿ ಅವಘಡಕ್ಕೆ ಯಾವುದೇ ಅಧಿಕೃತ ಕಾರಣ ಪತ್ತೆಯಾಗದಿದ್ದರೂ, ಆಚರಣೆಯ ಸಂದರ್ಭದಲ್ಲಿ ಬಳಸಿದ ಪಟಾಕಿಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ ಎಂದು ಇರಾಕ್‌ನ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.
ಘಟನೆ ಸಂಭವಿಸಿದ ಕೂಡಲೇ ಅಡುಗೆಗೆ ಬಳಸಿದ್ದ ಹೆಚ್ಚಿನ ಗ್ಯಾಸ್ ಸಿಲಿಂಡರ್ ಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದರ್ ಅವರು ಸರ್ಕಾರಿ ಇರಾಕಿ ನ್ಯೂಸ್ ಏಜೆನ್ಸಿ ಮೂಲಕ ಅಪಘಾತದ ಅಂಕಿಅಂಶವನ್ನು ನೀಡಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…