ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ – vishwanews24

Featured, ಅಂತಾರಾಷ್ಟ್ರೀಯ ನ್ಯೂಸ್, ರಾಷ್ಟ್ರ ನ್ಯೂಸ್

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್  ಅಧ್ಯಕ್ಷ ಇಬ್ರಾಹಿಂ ರೈಸಿ  ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಇರಾನ್‍ನ ಜನರು ಈ ದುಃಖದ ಸಮಯದಲ್ಲಿ ಇರಾನ್‍ನೊಂದಿಗೆ ನಿಂತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಘಟನೆ ವಿವರ: ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು.

ಕಾರ್ಕಳ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು -vishwanews24

Leave a Reply